alex Certify ಸತತ ಆರನೇ ಬಾರಿಗೆ ಬಜೆಟ್ ಮಂಡನೆ: ನಿರ್ಮಲಾ ಸೀತಾರಾಮನ್ ದಾಖಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸತತ ಆರನೇ ಬಾರಿಗೆ ಬಜೆಟ್ ಮಂಡನೆ: ನಿರ್ಮಲಾ ಸೀತಾರಾಮನ್ ದಾಖಲೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಮಧ್ಯಂತರ ಮುಂಗಡ ಪತ್ರ ಮಂಡಿಸಲಿದ್ದಾರೆ. ಈ ಮೂಲಕ ಅವರು ಸತತ ಆರನೇ ಬಾರಿಗೆ ಬಜೆಟ್ ಮಂಡನೆಯ ದಾಖಲೆ ಬರೆಯಲಿದ್ದಾರೆ.

ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಸೇರಿದಂತೆ ಹಲವರ ದಾಖಲೆಯನ್ನು ನಿರ್ಮಲಾ ಸೀತಾರಾಮನ್ ಹಿಂದಿಕ್ಕಲಿದ್ದಾರೆ. ಕೇಂದ್ರ ಹಣಕಾಸು ಸಚಿವರಾಗಿದ್ದ ಮನಮೋಹನ್ ಸಿಂಗ್, ಅರುಣ್ ಜೇಟ್ಲಿ, ಪಿ. ಚಿದಂಬರಂ, ಯಶವಂತ್ ಸಿನ್ಹಾ ಅವರು ಸತತ 5 ಬಜೆಟ್ ಗಳನ್ನು ಮಂಡಿಸಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಹಣಕಾಸು ಸಚಿವರಾಗಿದ್ದ 1959 -64ರ ನಡುವೆ 5 ವಾರ್ಷಿಕ ಮತ್ತು ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು.

ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು 2024- 25 ನೇ ಸಾಲಿನ ಮಧ್ಯಂತರ ಮುಂಗಡ ಪತ್ರ ಮಂಡಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...