
ಚಿಕ್ಕಮಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಶೃಂಗೇರಿಗೆ ಭೇಟಿ ನೀಡಿದ್ದಾರೆ.
ಕುಟುಂಬ ಸಮೇತರಾಗಿ ಚಿಕ್ಕಮಗಳೂರು ಜಿಲ್ಲೆಯ ಶ್ರೀ ಕ್ಷೇತ್ರ ಶೃಂಗೇರಿಗೆ ನಿನ್ನೆಯೇ ಆಗಮಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಶಾರದಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬಳಿಕ ಉಭಯ ಜಗದ್ಗುರುಗಳನ್ನು ಭೇಟಿಯಾಗಿ ಆಶಿರ್ವಾದ ಪಡೆದರು. ರಾತ್ರಿ ಶೃಂಗೇರಿ ಮಠದಲ್ಲಿಯೇ ವಾಸ್ತವ್ಯ ಹೂಡಿದ್ದರು.