ನವದೆಹಲಿ: ಇಂದು 2024 -25 ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಾಗುವುದು. ವೈಯಕ್ತಿಕ ತೆರಿಗೆ ಪಾವತಿದಾರರಿಗೆ ಬಜೆಟ್ ನಲ್ಲಿ ಪರಿಹಾರ ನೀಡುವ ನಿರೀಕ್ಷೆ ಇದೆ.
ಪ್ರಧಾನಿ ಮೋದಿ 3.0 ಸರ್ಕಾರದ ಮೊದಲ ಬಜೆಟ್ ಇದಾಗಿದ್ದು, ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸುವ ಮೂಲಕ ಪರಿಹಾರ ನೀಡಲಾಗುವುದು. ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80ಸಿ ಅಡಿಯಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು ಎರಡು ಲಕ್ಷಕ್ಕೆ ಹೆಚ್ಚಿಸುವ ನಿರೀಕ್ಷೆ ಇದೆ.
‘ವಿಕಸಿತ ಭಾರತ್ ಬಜೆಟ್ -2024’ ಹೆಸರಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸಲಿದ್ದಾರೆ. ದಾಖಲೆಯ 7ನೇ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.