ನವದೆಹಲಿ: ಕಾರ್ ಗಳಲ್ಲಿ ಆರು ಏರ್ ಬ್ಯಾಗ್ ಗಳು ಕಡ್ಡಾಯ ಹೇಳಿಕೆಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಿಂತೆಗೆದುಕೊಂಡಿದ್ದಾರೆ. ಸರ್ಕಾರ ಅದನ್ನು ಕಡ್ಡಾಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ನಾವು ಕಾರುಗಳಿಗೆ ಆರು ಏರ್ ಬ್ಯಾಗ್ ಗಳ ನಿಯಮವನ್ನು ಕಡ್ಡಾಯಗೊಳಿಸಲು ಬಯಸುವುದಿಲ್ಲ ಎಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗಡ್ಕರಿ ಹೇಳಿದ್ದಾರೆ.
2022 ರಲ್ಲಿ ಗಡ್ಕರಿ ಅವರು ಪ್ರಯಾಣಿಕ ಕಾರ್ ಗಳಿಗೆ 6 ಏರ್‌ಬ್ಯಾಗ್ ನಿಯಮವನ್ನು ಭಾರತ ಸರ್ಕಾರವು ಕಡ್ಡಾಯಗೊಳಿಸಿದೆ ಎಂದು ಹೇಳಿದ್ದರು. ಈ ನಿಯಮವು ಅಕ್ಟೋಬರ್ 2023 ರಲ್ಲಿ ಜಾರಿಗೆ ಬರಲಿದೆ ಎಂದು ಹೇಳಲಾಗಿತ್ತು.
ಈಗ ಗಡ್ಕರಿ ಅವರು, ಆರು ಏರ್ ಬ್ಯಾಗ್ ಹೇಳಿಕೆ ಹಿಂತೆಗೆದುಕೊಂಡಿದ್ದು, ಸರ್ಕಾರ ಅದನ್ನು ಕಡ್ಡಾಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.