
ನಿರೀಕ್ಷೆಯಂತೆ ಬಿಹಾರ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಬಿಜೆಪಿ ನೇತೃತ್ವದ ಎನ್ ಡಿ ಎ ಜೊತೆಗಿನ ಸಖ್ಯ ತೊರೆದಿದ್ದು, ಇಂದು ಸಂಜೆ 4 ಗಂಟೆಗೆ ರಾಜ್ಯಪಾಲ ಪಗು ಚವ್ಹಾನ್ ಅವರನ್ನು ಭೇಟಿಯಾಗಲಿದ್ದಾರೆ.
ಈ ಮೊದಲೇ ಬಿಜೆಪಿ ಜೊತೆಗಿನ ಮೈತ್ರಿ ತೊರೆಯುವ ಕುರಿತು ಸುಳಿವು ನೀಡಿದ್ದ ನಿತೀಶ್ ಕುಮಾರ್ ಇದೀಗ ಅಧಿಕೃತವಾಗಿ ಹೊರಬಂದಿದ್ದಾರೆ.
ಲಾಲು ಪ್ರಸಾದ್ ನೇತೃತ್ವದ ರಾಷ್ಟ್ರೀಯ ಜನತಾದಳ ಹಾಗೂ ಕಾಂಗ್ರೆಸ್ ಬೆಂಬಲದೊಂದಿಗೆ ನಿತೀಶ್ ತಮ್ಮ ಸರ್ಕಾರ ಉಳಿಸಿಕೊಳ್ಳುವ ಸಾಧ್ಯತೆ ಇದೆ.
ಅಲ್ಲದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಎಲ್ಲಾ ಪಕ್ಷಗಳು ಒಗ್ಗೂಡಿ ಬಿಜೆಪಿಯನ್ನು ಎದುರಿಸಲು ಸಿದ್ಧತೆ ನಡೆಸಿವೆ.