alex Certify BIG NEWS: ಹಾನಗಲ್ ಉಪಚುನಾವಣೆ; JDS ಅಭ್ಯರ್ಥಿ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾನಗಲ್ ಉಪಚುನಾವಣೆ; JDS ಅಭ್ಯರ್ಥಿ ಘೋಷಣೆ

ರಾಮನಗರ: ಹಾನಗಲ್ ಹಾಗೂ ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಪ್ರಕಟವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಬಿರುಸುಗೊಂಡಿದೆ. ಇದೀಗ ಜೆಡಿಎಸ್ ನಿಂದ ಹಾನಗಲ್ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಲಾಗಿದೆ.

ನಿರೀಕ್ಷೆಯಂತೆಯೇ ಜೆಡಿಎಸ್ ನಿಯಾಜ್ ಶೇಕ್ ಎಂಬುವವರಿಗೆ ಟಿಕೆಟ್ ಘೋಷಿಸಿದೆ. ಕೇತಗಾನಹಳ್ಳಿಯಲ್ಲಿ ನಡೆಯುತ್ತಿರುವ ಜೆಡಿಎಸ್ ಕಾರ್ಯಾಗಾರದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಹಾನಗಲ್ ನಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಯಾಜ್ ಶೇಕ್ ಅವರನ್ನು ಕಣಕ್ಕಿಳಿಸುವುದಾಗಿ ತಿಳಿಸಿದ್ದಾರೆ.

ಅಕ್ಟೋಬರ್ 30ರಂದು ಹಾನಗಲ್ ಹಾಗೂ ಸಿಂಧಗಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ನವೆಂಬರ್ 2ರಂದು ಫಲಿತಾಂಶ ಪ್ರಕಟವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...