ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ಕೊಲೆಯಾಗಿದ್ದಾರೆ ಎನ್ನಲಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ನಿವಾಸಕ್ಕೆ ನಾಳೆ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.
ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್ ಈ ಬಗ್ಗೆ ಮಾಹಿತಿ ನೀಡಿದ್ದು, ನಾಳೆ ರೇಣುಕಾ ಸ್ವಾಮಿ ಮನೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಭೇಟಿ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡ ಚಿತ್ರರಂಗದ ದೊಡ್ಡ ನಟ. ತನಿಖಾ ವರದಿ ಬಂದು ಅಪರಾಧಿ ಎಂದು ಸಾಬೀದಾದರೆ ಚಿತ್ರರಂಗದ ಅಂಗ ಸಂಸ್ಥೆಗಳೆಲ್ಲ ಒಟ್ಟಿಗೆ ಸೇರಿ ನಿರ್ಧಾರ ಕೈಗೊಳ್ಳುತ್ತೇವೆ. ಅವರು ಮಾಡಿರುವ ಕೃತ್ಯವನ್ನು ವಾಣಿಜ್ಯ ಮಂಡಳಿ ಖಂಡಿಸುತ್ತದೆ. ಕೃತ್ಯ ಎಸಗಿರುವವರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ.
ಹತ್ಯೆಯಾಗಿರುವ ರೇಣುಕಾ ಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಬೇಕು. ನಾಳೆ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಚಿತ್ರದುರ್ಗದ ರೇಣುಕಾಸ್ವಾಮಿ ನಿವಾಸಕ್ಕೆ ತೆರಳಿ ಸಾಂತ್ವನ ಹೇಳುತ್ತೇವೆ. ರೇಣುಕಾಸ್ವಾಮಿ ಕುಟುಂಬ ಭೇಟಿಯಾಗಿ ಕುಂದು ಕೊರತೆ ಆಲಿಸುತ್ತೇವೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್ ಹೇಳಿದ್ದಾರೆ.