alex Certify ವಿದ್ಯಾರ್ಥಿಗಳಿಗೆ NMC ಗುಡ್ ನ್ಯೂಸ್: 2020 -21 ರಲ್ಲಿ ದಾಖಲಾದ ವೈದ್ಯ ಅಭ್ಯರ್ಥಿಗಳಿಗೆ ಹೆಚ್ಚುವರಿ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ NMC ಗುಡ್ ನ್ಯೂಸ್: 2020 -21 ರಲ್ಲಿ ದಾಖಲಾದ ವೈದ್ಯ ಅಭ್ಯರ್ಥಿಗಳಿಗೆ ಹೆಚ್ಚುವರಿ ಅವಕಾಶ

ನವದೆಹಲಿ: ಕೊರೋನಾ ಸಾಂಕ್ರಾಮಿಕ ಇದ್ದ ಕಾರಣ 2020 -21ನೇ ಸಾಲಿನಲ್ಲಿ ಎಂಬಿಬಿಎಸ್ ಪದವಿ ಕೋರ್ಸ್ ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರದಿದ್ದಲ್ಲಿ ಅವರಿಗೆ ಹೆಚ್ಚುವರಿ ಒಂದು ಅವಕಾಶ ನೀಡಲು ನಿರ್ಧರಿಸಲಾಗಿದೆ.

ಈ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಒಂದು ಹೆಚ್ಚುವರಿ(5ನೇ ಅವಕಾಶ) ನೀಡಲು ರಾಷ್ಟ್ರೀಯ ವೈದ್ಯಕೀಯ ಆಯೋಗ(NMC) ತೀರ್ಮಾನಿಸಿದೆ. 2020 -21ರ ಅವಧಿಯಲ್ಲಿ ಕೋವಿಡ್ ಸಾಂಕ್ರಾಮಿಕ ಕಾಡಿದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ಒಂದು ಬಾರಿಗೆ ಮಾತ್ರ ತೆಗೆದುಕೊಂಡಿರುವ ನಿರ್ಧಾರವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಜಾರಿ ಮಾಡುವುದಿಲ್ಲ ಎಂದು ತಿಳಿಸಲಾಗಿದೆ.

ಆ ಶೈಕ್ಷಣಿಕ ವರ್ಷದ ಅನುತ್ತೀರ್ಣ ಅಭ್ಯರ್ಥಿಗಳಿಗೆ ಅನ್ವಯಿಸಿ ಐದನೇ ಯತ್ನ ನೀಡಲಾಗುವುದು. ಆ ವರ್ಷದ ಶೈಕ್ಷಣಿಕ ವರ್ಷದ ಕಲಿಕೆಯು ಕೋವಿಡ್ ಕಾರಣದಿಂದ ಬಾಧಿತವಾಗಿದ್ದ ಹಿನ್ನೆಲೆಯಲ್ಲಿ ಒಂದು ಬಾರಿ ಮಾತ್ರ ಹೆಚ್ಚುವರಿ ಅವಕಾಶ ನೀಡಿದ್ದು, ಮುಂದೆ ನೀಡುವುದಿಲ್ಲ ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...