ಬೆಂಗಳೂರು : 2024-25ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್-ಮೆರಿಟ್ ವಿದ್ಯಾರ್ಥಿ ವೇತನ (National Means-cum-Merit Scholarship-NMMS) ಪರೀಕ್ಷೆಯನ್ನು 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ: 02.02.2025 (ಭಾನುವಾರ) ರಂದು ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಈ ಪರೀಕ್ಷೆಗೆ ಸಂಬಂಧಿಸಿದಂತೆ ಅಗತ್ಯವಿರುವ ಎಲ್ಲಾ ಪೂರ್ವಸಿದ್ಧತೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕಾಗಿರುವುದು ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು/ ಸಿಬ್ಬಂದಿ ವರ್ಗದವರ ಪ್ರಮುಖ ಜವಾಬ್ದಾರಿಯಾಗಿರುತ್ತದೆ.
2024-25ನೇ ಸಾಲಿನ NMMS ಪರೀಕ್ಷೆಗೆ ನಿಗದಿಪಡಿಸಿರುವ ವೇಳಾಪಟ್ಟಿ
ಪ್ರಶ್ನೆಪತ್ರಿಕೆಗಳು
ಬೌದ್ಧಿಕ ಸಾಮರ್ಥ್ಯ ಪರೀಕ್ಷೆ Mental Ability Test (MAT)
ಪರೀಕ್ಷಾ ದಿನಾಂಕ
02.02.2025 ಭಾನುವಾರ
ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ Scholastic Aptitude Test (SAT)
02.02.2025 ಭಾನುವಾರ
ನಿಗದಿಪಡಿಸಿದ ಸಮಯ
ដ 10.30-12.000 (ಒಟ್ಟು 90 ನಿಮಿಷಗಳು)
(ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ 30 ನಿಮಿಷ ಹೆಚ್ಚುವರಿ ಸಮಯವಿರುತ್ತದೆ )
(30 minutes extra time will be given to the Children With Special Needs)
(CWSN)
ಮಧ್ಯಾಹ್ನ 2.00 ರಿಂದ 3.30 ರವರೆಗೆ (ಒಟ್ಟು 90 ನಿಮಿಷಗಳು)
(ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ 30 ನಿಮಿಷ ಹೆಚ್ಚುವರಿ ಸಮಯವಿರುತ್ತದೆ) (30 minutes extra time will be given to the Children With Special Needs) (CWSN)
ಪ್ರಶ್ನೆಪತ್ರಿಕೆಯ ಸ್ವರೂಪ ಮತ್ತು ಒ.ಎಂ.ಆರ್ ವಿಧಾನ
NMMS ಪರೀಕ್ಷೆಯು 2 ಪತ್ರಿಕೆಗಳನ್ನು ಒಳಗೊಂಡಿರುತ್ತದೆ.
ಪತ್ರಿಕೆ-1 ಮಾನಸಿಕ ಸಾಮರ್ಥ್ಯ ಪರೀಕ್ಷೆ (Mental Ability Test – MAT): ಈ ಪ್ರಶ್ನೆಪತ್ರಿಕೆಯಲ್ಲಿ 90 ಬಹುಆಯ್ಕೆ
ಮಾದರಿಯ ಪ್ರಶ್ನೆಗಳಿರುತ್ತವೆ. ಪ್ರತಿ ಪ್ರಶ್ನೆಗೂ ಒಂದು ಅಂಕದಂತೆ 90 ಅಂಕಗಳನ್ನು ನಿಗದಿಪಡಿಸಲಾಗಿದ್ದು, ಕಾರಣ ನೀಡುವ, ವಿಶ್ಲೇಷಿಸುವ ಇತ್ಯಾದಿ ಸಾಮರ್ಥ್ಯಗಳನ್ನು ಆಳೆಯುವ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.
ಪತ್ರಿಕೆ-2 ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ (Scholastic Aptitude Test – SAT):- ಈ ಪತ್ರಿಕೆಯು ಪ್ರತಿ ಪ್ರಶ್ನೆಗೂ ಒಂದು ಅಂಕದಂತೆ ಒಟ್ಟು 90 ಅಂಕಗಳಿಗೆ ಒಟ್ಟು 90 ಬಹುಆಯ್ಕೆ ಮಾದರಿಯ ಪ್ರಶ್ನೆಗಳನ್ನು ಒಳಗೊಂಡಿದ್ದು, ಇವುಗಳಲ್ಲಿ 35 ಪ್ರಶ್ನೆಗಳು ವಿಜ್ಞಾನ (ಭೌತಶಾಸ್ತ್ರ, ರಸಾಯನ ಶಾಸ್ತ್ರ ಮತ್ತು ಜೀವಶಾಸ್ತ್ರ), 35 ಪ್ರಶ್ನೆಗಳು ಸಮಾಜ ವಿಜ್ಞಾನ (ಇತಿಹಾಸ, ಭೂಗೋಳ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ ಮತ್ತು ವ್ಯವಹಾರ ಅಧ್ಯಯನ) ಮತ್ತು 20 ಪ್ರಶ್ನೆಗಳು ಗಣಿತ ವಿಷಯಕ್ಕೆ ಸಂಬಂಧಿಸಿರುತ್ತವೆ.