
ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ರಾಷ್ಟ್ರೀಯ ಮೆರಿಟ್ ವಿದ್ಯಾರ್ಥಿ ವೇತನ(ಎನ್ಎಂಎಂಎಸ್) ಪರೀಕ್ಷೆ ಜನವರಿ 7ರಂದು ನಡೆಯಲಿದೆ.
ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ ವತಿಯಿಂದ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳಿಗೆ ಡಿಸೆಂಬರ್ 21ರಿಂದಲೇ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಡಿಸೆಂಬರ್ 28 ರ ಒಳಗೆ ಶಾಲಾ ಮುಖ್ಯಸ್ಥರು, ಪ್ರಾಂಶುಪಾಲರು ಸಹಿ ಮಾಡಿ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ವಿತರಿಸುವಂತೆ ತಿಳಿಸಲಾಗಿದೆ.
ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿಗದಿಪಡಿಸಿದ ಪರೀಕ್ಷಾ ಕೇಂದ್ರದ ಮಾಹಿತಿ ಮತ್ತು ಸೂಕ್ತ ಮಾರ್ಗದರ್ಶನವನ್ನು ಸಂಬಂಧಿಸಿದ ಮುಖ್ಯ ಶಿಕ್ಷಕರು, ಪ್ರಾಂಶುಪಾಲರು ನೀಡುವಂತೆ ಪರಿಷತ್ ನಿರ್ದೇಶಕರು ತಿಳಿಸಿದ್ದಾರೆ.