ಬೆಂಗಳೂರು : ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ, ಜೆಡಿಎಸ್ ಏಕಾಂಗಿಯಾಗಿ ಹೋರಾಟ ನಡೆಸಲಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವದಂತಿಗಳಿಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ದೇವೇಗೌಡರು ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ಕೂಡ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ ನೀಡಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದೇ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದರು. ಬಿಜೆಪಿ ಪಕ್ಷದಲ್ಲಿ ನಡೆಯುವ ಬೆಳವಣಿಗೆ ಬಗ್ಗೆ ನಾವು ಚರ್ಚೆ ಮಾಡುವುದಿಲ್ಲ. ಅದು ಅವರ ಪಕ್ಷಕ್ಕೆ ಬಿಟ್ಟ ವಿಚಾರ ಎಂದರು. ಲೋಕಸಭೆ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷದ ಜೊತೆ ಚುನಾವಣಾ ಮೈತ್ರಿ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ ಅವರು, ಕಾಂಗ್ರೆಸ್ ಯಾವ ಯಾವ ರಾಜ್ಯದಲ್ಲಿ ಯಾರು ಯಾರನ್ನು ತಬ್ಬಿಕೊಳ್ಳಲು ಹೋಗಿವೆ ಎಂಬುದು ಗೊತ್ತಿಲ್ಲವೇ..? ಎಂದು ಪ್ರಶ್ನಿಸಿದರು ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕರಾಗ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಸದ್ಯ ಈ ಎಲ್ಲ ಚರ್ಚೆಗಳಿಗೂ ಬ್ರೇಕ್ ಬಿದ್ದಿದೆ.
ಬಿಜೆಪಿಗೆ ಇನ್ನು ಶಾಸಕಾಂಗ ಪಕ್ಷದ ನಾಯಕ ಸಿಕ್ಕಿಲ್ಲ. ಪ್ರತಿಪಕ್ಷ ನಾಯಕನ ಸ್ಥಾನ ಅಲಂಕರಿಸುವ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮತ್ತಷ್ಟು ಕಗ್ಗಂಟಾಗಿದೆ. ಬಜೆಟ್ , ವಿಧಾನಮಂಡಲ ಅಧಿವೇಶನ ನಡೆದರೂ ಇನ್ನೂ ಕೂಡ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ಅಂತಿಮವಾಗಿಲ್ಲ. ಈ ನಡುವೆ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ ಸ್ಪೋಟಕ ಹೇಳಿದ್ದಾರೆ. ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ, ಬಸವಗೌಡ ಪಾಟೀಲ್ ಯತ್ನಾಳ್ ವಿಪಕ್ಷ ನಾಯಕರಾಗುವುದು ಬಹುತೇಕ ಖಚಿತ ಎಂದಿದ್ದಾರೆ.