ಹಾಸನ : ರಾಜ್ಯದಲ್ಲಿ ಯಾವುದೇ ಬಿಪಿಎಲ್ (BPL) ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
ಹಾಸನದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ‘ಯಾರು ಅರ್ಹರಿರುತ್ತಾರೋ ಅವರಿಗೆ ಪರಿಶೀಲನೆ ಮಾಡಿ ಬಿಪಿಎಲ್ ಕಾರ್ಡ್ ಕೊಡಲಿದ್ದೇವೆ, ಯಾವುದೇ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ. ಕೆಲವರ ಬ್ಯಾಂಕ್ ಖಾತೆ ಇಲ್ಲದ ಕಾರಣ ಪಡಿತರ ಚೀಟಿ ರದ್ದಾಗಿತ್ತು. 3 ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್, ಎಪಿಎಲ್ ಕಾರ್ಡ್ ವಿತರಿಸಲಿದ್ದೇವೆ’ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಪಿಎಲ್ ಕಾರ್ಡ್ ಗೆ 3 ಲಕ್ಷ ಅರ್ಜಿ ಬಂದಿದ್ದವು. ಅರ್ಜಿ ಬಗ್ಗೆ ಪರಿಶೀಲನೆ ಮಾಡಿ ಅನುಮೋದನೆ ನೀಡಲು ಸೂಚನೆ ನೀಡಲಾಗಿದೆ. ಎಲ್ಲವನ್ನೂ ಪರಿಶೀಲಿಸಿಯೇ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ವಿತರಣೆ ಮಾಡಲಿದ್ದೇವೆ, ಅರ್ಹ ಜನರಿಗೆ ಯಾವುದೇ ತೊಂದರೆ ಆಗಲ್ಲ . ಎಲ್ಲವನ್ನೂ ಪರಿಶೀಲನೆ ಮಾಡಿ ಅಕ್ಕಿ ವಿತರಣೆ ಮಾಡಲಿದ್ದೇವೆ ಎಂದು ಸಚಿವರು ಹೇಳಿದರು.
ಪಡಿತರ ಚೀಟಿದಾರರ ಗಮನಕ್ಕೆ : `E-KYC’ ಮಾಡಲು ಆಗಸ್ಟ್ 31 ಕೊನೆಯ ದಿನಾಂಕ
ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮುಖ್ಯದ ಮಾಹಿತಿ ನೀಡಿದ್ದು, ಆಗಸ್ಟ್ 31 ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಬೇಕು. ಇಲ್ಲವಾದಲ್ಲಿ ರೇಷನ್ ಕಾರ್ಡ್ ನಲ್ಲಿರುವ ಹೆಸರು ರದ್ದಾಗಲಿದೆ ಎಂದು ತಿಳಿಸಿದೆ. ನ್ಯಾಯಬೆಲೆ ಅಂಗಡಿಯಲ್ಲಿ ನೀವು ಬ್ಯಾಂಕ್ ಖಾತೆಗೆ ಆಧಾರ್ ಕೂಡ ಲಿಂಕ್ ಮಾಡಿಸಿಕೊಳ್ಳಬಹುದು. ಇದಕ್ಕೆ ಬೇಕಾಗುವ ದಾಖಲೆಗಳು.
1) ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
2)ಕುಟುಂಬದ ಸದಸ್ಯರ ಭಾವಚಿತ್ರ
3)ಕುಟುಂಬದ ಒಬ್ಬ ಸದಸ್ಯರ ಮೊಬೈಲ್ ಸಂಖ್ಯೆ ಮತ್ತು ಬಯೋಮೆಟ್ರಿಕ್
4)ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವುದಾದರೆ ಪಾಸ್ ಬುಕ್ ವಿವರ ಬೇಕಾಗುತ್ತದೆ.
ಆನ್ಲೈನ್ ಕೆವೈಸಿ ನವೀಕರಣ ಪ್ರಕ್ರಿಯೆ
ಮೊದಲಿಗೆ, ಗ್ರಾಹಕರು ತಮ್ಮ ಬ್ಯಾಂಕಿನ ಅಧಿಕೃತ ಪೋರ್ಟಲ್ ಅನ್ನು ತೆರೆಯಬೇಕು ಮತ್ತು ಲಾಗ್ ಇನ್ ಮಾಡಬೇಕು. ಅದರ ನಂತರ, ಕೆವೈಸಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
– ಸೂಚನೆಗಳನ್ನು ಅನುಸರಿಸಿ ಮತ್ತು ನಿಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಇತ್ಯಾದಿಗಳನ್ನು ನಮೂದಿಸಿ.
– ಆಧಾರ್, ಪ್ಯಾನ್ ಮತ್ತು ಇತರ ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಂತರ ಅಪ್ಲೋಡ್ ಮಾಡಬೇಕು. ಈ ದಾಖಲೆಗಳನ್ನು ಎರಡೂ ಬದಿಗಳಲ್ಲಿ ಸ್ಕ್ಯಾನ್ ಮಾಡುವುದು ಕಡ್ಡಾಯವಾಗಿದೆ.
– ಪ್ರಕ್ರಿಯೆ ಪೂರ್ಣಗೊಂಡ ನಂತರ, ಸಬ್ಮಿಟ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಇದು ನಿಮಗೆ ಸೇವಾ ವಿನಂತಿ ಸಂಖ್ಯೆಯನ್ನು ನೀಡುತ್ತದೆ. ಕೆವೈಸಿ ನವೀಕರಣ ಮಾಹಿತಿಯನ್ನು ನಂತರ ಗ್ರಾಹಕರಿಗೆ ಸಂದೇಶ ಅಥವಾ ಮೇಲ್ ಮೂಲಕ ತಿಳಿಸಲಾಗುತ್ತದೆ.