
ಶಿವಮೊಗ್ಗ : ಬಿಜೆಪಿಯ ಯಾವ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ. ವಿಪಕ್ಷದವರನ್ನು ವೀಕ್ ಮಾಡಲು ಕಾಂಗ್ರೆಸ್ ನವರು ಈ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರ ಬಂಗಾರಪ್ಪ ಸೇರಿದಂತೆ ಯಾವ ನಾಯಕರೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋಗಲ್ಲ. ವಿಪಕ್ಷದವರನ್ನು ವೀಕ್ ಮಾಡುವಂತಹ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ತಮ್ಮ ದೌರ್ಬಲ್ಯ ಮುಚ್ಚಿಕೊಳ್ಳಲು ಇಂತಹ ಅಪಪ್ರಚಾರಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.