ಬೆಂಗಳೂರು : ರಾಜ್ಯ ಬಿಜೆಪಿ ನಾಯಕರ ನಿಯೋಗವು ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಅದೇ ದಿನ ಎಂಎಲ್ ಸಿ ಸ್ಥಾನಕ್ಕೆ ಉಪಚುನಾವಣೆ ನಿಗದಿಯಾಗಿರುವುದರಿಂದ ಬಜೆಟ್ ಮಂಡನೆಯ ದಿನಾಂಕವನ್ನು ಮುಂದೂಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದೆ.
ರಾಜ್ಯ ಸರ್ಕಾರ ಫೆಬ್ರವರಿ 16 ರಂದು ಬಜೆಟ್ ಮಂಡನೆಯ ದಿನಾಂಕವನ್ನು ಘೋಷಿಸಿದ್ದು, ಅದೇ ದಿನ ಎಂಎಲ್ ಸಿ ಸ್ಥಾನಕ್ಕೆ ಉಪಚುನಾವಣೆ ನಿಗದಿಯಾಗಿರುವುದರಿಂದ ಬಜೆಟ್ ಮಂಡನೆಯ ದಿನಾಂಕವನ್ನು ಮುಂದೂಡುವಂತೆ ಒತ್ತಾಯಿಸಿ ಬಿಜೆಪಿ ಮನವಿ ಸಲ್ಲಿಸಿದೆ. ಮಾಜಿ ಸಚಿವರಾದ ಡಾ.ಅಶ್ವತ್ಥ ನಾರಾಯಣ, ವಿ.ಸುನಿಲ್ ಕುಮಾರ್ ಮತ್ತು ಮುನಿರತ್ನ ಅವರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಬಜೆಟ್ ಮಂಡನೆಯನ್ನು ಮುಂದೂಡುವಂತೆ ಒತ್ತಾಯಿಸಿತು.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಜನವರಿ 16ರಂದು ಉಪಚುನಾವಣೆ ನಡೆಸಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಜನವರಿ 18 ರಂದು ಬಜೆಟ್ ಮಂಡನೆಯನ್ನು ಫೆಬ್ರವರಿ 16 ರಂದು ನಡೆಸಲು ನಿರ್ಧರಿಸಿತು.