ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಇಂದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಉಪಚುನಾವಣೆ ದಿನಾಂಕ ಘೋಷಿಸುವ ನಿರೀಕ್ಷೆಯಿತ್ತು. ಆದರೆ ಯಾವುದೇ ರಾಜ್ಯಗಳ ಉಪಚುನಾವಣೆಯನ್ನು ಘೋಷಣೆ ಮಾಡಿಲ್ಲ.
ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೊಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಜಮ್ಮು-ಕಾಶ್ಮೀರ ಹಾಗೂ ಹರ್ಯಾಣ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಮಾತ್ರ ಪ್ರಕಟಿಸಿದರು. ಈ ವೇಳೆ ಯಾವುದೇ ರಾಜ್ಯಗಳ ಉಪಚುನಾವಣೆ ಸದ್ಯಕ್ಕಿಲ್ಲ ಎಂದು ತಿಳಿಸಿದ್ದಾರೆ.
ಯಾವುದೇ ರಾಜ್ಯಗಳ ವಿಧಾನಸಭೆ ಹಾಗೂ ಲೋಕಸಭಾ ಉಪಚುನಾವಣೆ ಸದ್ಯಕ್ಕೆ ನಡೆಯುವುದಿಲ್ಲ. 46 ವಿಧಾನಸಭೆ ಹಾಗೂ ಲೋಕಸಭೆಯ 1 ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿತ್ತು. ಆದರೆ ಕೆಲ ರಾಜ್ಯಗಳಲ್ಲಿ ಹವಾಮಾನ ವೈಫರಿತ್ಯ, ಪ್ರಕೃತಿ ವಿಕೋಪ ಸಂಭವಿಸಿದೆ. ಅಸ್ಸಾಂ, ಬಿಹಾರ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರವಾಹ, ಭೂ ಕುಸಿತವುಂಟಾಗಿರುವುದರಿಂದ ಈ ಸಂದರ್ಭದಲ್ಲಿ ಆ ರಾಜ್ಯಗಳಲ್ಲಿ ಚುನಾವಣೆ ಸಾಧ್ಯವಿಲ್ಲ. ಪರಿಸ್ಥಿತಿ ಸುಧಾರಿಸಿದ ಬಳಿಕ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು.