ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆ ಈ ತಿಂಗಳ ಅಂತ್ಯಕ್ಕೆ ಜಾರಿಗೆ ಬರಲಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಆರೋಗ್ಯ ಯೋಜನೆ ಹೆಸರಲ್ಲಿ ನಗದು ರಹಿತ ಆರೋಗ್ಯ ಸೇವೆ ನೀಡಲಾಗುವುದು. ಯೋಜನೆ ಜಾರಿಗೆ ಆರ್ಥಿಕ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಯೋಜನೆಯಿಂದ 25 ಲಕ್ಷ ಜನರಿಗೆ ಅನುಕೂಲವಾಗಲಿದೆ.
ಇದುವರೆಗೆ ನೌಕರರು ಹಣ ಪಾವತಿಸಿ ಆರೋಗ್ಯ ಸೇವೆ ಪಡೆದ ನಂತರ ಮರುಪಾವತಿ ಪಡೆಯಬೇಕಿತ್ತು. ಈಗ ನಗದು ರಹಿತವಾಗಿ ಆರೋಗ್ಯ ಸೇವೆ ಒದಗಿಸಲಾಗುತ್ತದೆ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರು ಚಿಕಿತ್ಸೆಗಾಗಿ ಹಣ ಹೊಂದಿಸದೆ ನಗದು ರಹಿತವಾಗಿ ಆರೋಗ್ಯ ಸೇವೆ ಪಡೆಯಬಹುದಾಗಿದೆ ಎಂದು ಹೇಳಲಾಗಿದೆ.