ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆ(CUET –UG) ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ.
ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ಈ ಬಗ್ಗೆ ಸ್ಪಷ್ಟಪಡಿಸಿದ್ದು, ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ(NTA) ಈ ಮೊದಲು ಪ್ರಕಟಿಸಿದಂತೆ ಮೇ 15 ಮತ್ತು 31 ರಂದು CUET -UG ಪರೀಕ್ಷೆ ನಡೆಯಲಿದೆ. ಮಾರ್ಚ್ 26 ನೋಂದಣಿಗೆ ಕೊನೆಯ ದಿನವಾಗಿದ್ದು, ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಭೌಗೋಳಿಕ ವಿವರ ಬಿಡುಗಡೆ ಮಾಡಲಾಗುತ್ತದೆ.
ಮೇ 20 ಮತ್ತು 25 ರಂದು ನಡೆಯುವ ಮತದಾನ ಪ್ರಕ್ರಿಯೆ ಪರೀಕ್ಷಾ ದಿನಾಂಕಗಳಿಗೆ ಅಡ್ಡಿಯಾಗದು ಎಂದು ಅವರು ಮಾಹಿತಿ ನೀಡಿದ್ದಾರೆ. ದೇಶಾದ್ಯಂತ ಕೇಂದ್ರ, ರಾಜ್ಯ, ಡೀಮ್ಡ್ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಿಗೆ ಪ್ರವೇಶ ಕಲ್ಪಿಸಲು CUET -UG ಪರೀಕ್ಷೆ ನಡೆಸಲಾಗುವುದು.