alex Certify BIG NEWS: ಸ್ಪೀಕರ್ ವಿರುದ್ಧ ಬಿಜೆಪಿ ಸದಸ್ಯರಿಂದ ಅವಿಶ್ವಾಸ ಗೊತ್ತುವಳಿ ನೊಟೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ಪೀಕರ್ ವಿರುದ್ಧ ಬಿಜೆಪಿ ಸದಸ್ಯರಿಂದ ಅವಿಶ್ವಾಸ ಗೊತ್ತುವಳಿ ನೊಟೀಸ್

ಬೆಂಗಳೂರು: ಸ್ಪೀಕರ್ ಯು.ಟಿ.ಖಾದರ್ ಸದನದ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸ್ಪೀಕರ್ ವಿರುದ್ಧ ಅವಿಶ್ವಾಸಗೊತ್ತುವಳಿ ನೊಟೀಸ್ ನೀಡಿದ್ದಾರೆ.

ಸ್ಪೀಕರ್ ವಿರುದ್ಧ ವಿಧಾನಸಭೆ ಕಾರ್ಯದರ್ಶಿಸಿಗೆ ಬಿಜೆಪಿ ಸದಸ್ಯರು ಸಹಿ ಮಾಡಿರುವ ಅವಿಶ್ವಾಸಗೊತ್ತುವಳಿ ನೊಟೀಸ್ ನೀಡಿದ್ದು, ನೊಟೀಸ್ ಗೆ ಬಿಜೆಪಿ ಪರವಾಗಿ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೂಡ ಸಹಿ ಹಾಕಿದ್ದಾರೆ.

ಸ್ಪೀಕರ್ ಆಡಳಿತ ಪಕ್ಷದ ಪರವಾಗಿದ್ದಾರೆ. ಸದನದ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಆರೊಪಿಸಿರುವ ಬಿಜೆಪಿ ಸದಸ್ಯರು, ಖಾದರ್ ಅವರನ್ನು ಸ್ಪೀಕರ್ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ನಿರ್ಣಯ ಮಮ್ಡಿದ್ಸಲು ಅವಕಾಶ ಕೊಡುವಂತೆ ಮನವಿ ಮಾಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...