alex Certify Nandi Hills : ರಾಷ್ಟ್ರಪತಿ ಆಗಮನ ಹಿನ್ನೆಲೆ : ಇಂದು, ನಾಳೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Nandi Hills : ರಾಷ್ಟ್ರಪತಿ ಆಗಮನ ಹಿನ್ನೆಲೆ : ಇಂದು, ನಾಳೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಹಿನ್ನೆಲೆ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಜು.2 ಮತ್ತು 3 ರಂದು ಪ್ರವಾಸಿಗರಿಗೆ ಪ್ರವೇಶ ನಿಷೇಧ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಈ ಕುರಿತು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದು, ಭದ್ರತಾ ದೃಷ್ಠಿಯಿಂದ ನಂದಿ ಗಿರಿಧಾಮಕ್ಕೆ ಮತ್ತು ಸ್ಕಂದಗಿರಿಗೆ ಬರುವ ಪ್ರವಾಸಿಗರಿಗೆ ಜು.2ರ ಬೆಳಗ್ಗೆ 6 ಗಂಟೆಯಿಂದ ಜು.3ರ ಸಂಜೆ ಆರು ಗಂಟೆಯವರೆಗೂ ನಿಷೇಧ ಹೇರಿರುವುದಾಗಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ. ಈ ಎರಡು ದಿನ ಪ್ರವಾಸಿಗರು ನಂದಿಗಿರಿ ಮತ್ತು ಸ್ಕಂದಗಿರಿಧಾಮಗಳಿಗೆ ಬರಬೇಡಿ ಎಂದು ಡಿಸಿ ಮನವಿ ಮಾಡಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಜು. 3ರಂದು ಸೋಮವಾರ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮಕ್ಕೆ ಭೇಟಿ ನೀಡಲಿದ್ದು, ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ಎರಡನೇ ವರ್ಷದ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...