
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ಮುಂದೆ 15 ವರ್ಷ ಹಳೆಯ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಪೂರೈಯಿಸುವುದಿಲ್ಲ ಎಂದು ಸರ್ಕಾರ ತಿಳಿಸಿದೆ.
ಈ ಬಗ್ಗೆ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ, ಮಾಹಿತಿ ನೀಡಿದ್ದು, 15 ವರ್ಷ ಹಳೆಯ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್ ಬಂಕ್ ಗಳಲ್ಲಿ ಪೆಟ್ರೋಲ್ ಡೀಸೆಲ್ ಸಿಗುವುದಿಲ್ಲ. ಮಾರ್ಚ್ 31ರ ಬಳಿಕ ಈ ನಿಯಮ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಹಳೆಯ ವಾಹನಗಳನ್ನು ಗುರುತಿಸಲು ವಿಶೇಷ ತಂಡ ರಚನೆ ಮಾಡಲಾಗುವುದು. ಮಾಲಿನ್ಯ ನಿಯಂತ್ರಣಕ್ಕೆ ಹೋಟೆಲ್ ಗಳಲ್ಲಿ ಹೊಗೆ ನಿರೋಧಕ ಅಳವಡಿಕೆ ಮಾಡುವುದು ಕಡ್ಡಾಯವಾಗಿದೆ. ವಾಯುಮಾಲಿನ್ಯ ಸಂದರ್ಭದಲ್ಲಿ ಮೋಡ ಬಿತ್ತನೆಗೆ ಸಿದ್ಧತೆ ನಡೆಸಲಾಗಿದೆ. ಖಾಲಿ ಜಾಗಗಳಲ್ಲಿ ಗಿಡಗಳನ್ನು ನೆಡಲಾಗುವುದು ಎಂದು ತಿಳಿಸಿದರು.