ಬೆಂಗಳೂರು : ಖಾಸಗಿ ಸಾರಿಗೆ ಒಕ್ಕೂಟ ಸೋಮವಾರ (ಸೆ.11) ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಆದರೆ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ.
ಸಾರಿಗೆ ಒಕ್ಕೂಟಗಳು ಕರೆ ನೀಡಿರುವ ಬೆಂಗಳೂರು ಬಂದ್ಗೆ ಖಾಸಗಿ ಶಾಲೆಗಳು ನೈತಿಕ ಬೆಂಬಲ ವ್ಯಕ್ತಪಡಿಸಿವೆ. ಬಂದ್ಗೆ ಬೆಂಬಲ ಸೂಚಿಸಿ ಕೆಲವು ಶಾಲೆಗಳು ರಜೆ ಘೋಷಣೆ ಮಾಡಿದೆ. ಆದರೆ ಶಿಕ್ಷಣ ಇಲಾಖೆ ಮಾತ್ರ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ನೀಡಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ.
ಸೋಮವಾರ ಬೆಂಗಳೂರು ಬಂದ್ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಸರ್ಕಾರಿ ಶಾಲಾ, ಕಾಲೇಜುಗಳಿಗೆ ರಜೆ ಇಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಜಿಲ್ಲಾಧಿಕಾರಿಗಳಿಗೆ ಪರಿಸ್ಥಿತಿ ನೋಡಿಕೊಂಡು ರಜೆ ನೀಡುವ ಅಧಿಕಾರವನ್ನು ನೀಡಲಾಗಿದೆ. ರಜೆ ಕೊಡುವ ಕುರಿತು ಆಯಾ ಶಾಲಾ ಆಡಳಿತ ಮಂಡಳಿಗಳು ತೀರ್ಮಾನ ಕೈಗೊಳ್ಳಬೇಕು ಎಂದು ಸ್ಪಷ್ಟಪಡಿಸಲಾಗಿದೆ.
ರಜೆ ಕೊಡುವ ಬಗ್ಗೆ ಆಯಾ ಶಾಲಾ ಆಡಳಿತ ಮಂಡಳಿಗಳು ನಿರ್ಧಾರ ಮಾಡಬಹುದು. ಆದರೆ ಯಾವುದೇ ಸಂಘಟನೆಯಿಂದ ಅಧಿಕೃತ ರಜೆ ನೀಡುವುದಿಲ್ಲ ಎಂದು ಕ್ಯಾಮ್ಸ್, ಕುಸ್ಮಾ ಸಂಘಟನೆಗಳು ಮಾಹಿತಿ ನೀಡಿವೆ.
ಈ ಬಗ್ಗೆ ಸ್ಪಷ್ಟನೆ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸರ್ಕಾರದಿಂದ ಯಾವುದೇ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಶಾಲಾ ಕಾಲೇಜುಗಳಿಗೆ ಯಾವುದೇ ತೊಂದರೆಯಾಗಲ್ಲ. ಬಂದ್ ಹಿನ್ನೆಲೆ ಹೆಚ್ಚುವರಿ 500 ಬಿಎಂಟಿಸಿ ಬಸ್ ಬಿಡಲಾಗಿದೆ ಎಂದರು.