ಬೆಂಗಳೂರು : ಕೆಲವು ಮಾಧ್ಯಮಗಳಲ್ಲಿ ಶಾಸಕ ಹರೀಶ್ ಗೌಡಗೆ ಹನಿಟ್ರ್ಯಾಪ್ ಮಾಡಲಾಗಿದೆ ಎಂಬ ಸುದ್ದಿ ಬಿತ್ತರವಾಗುತ್ತಿದ್ದು, ನನ್ನ ಮೇಲೆ ಹನಿಟ್ರ್ಯಾಪ್ ಎಂದು ಇದೀಗ ಶಾಸಕ ಹರೀಶ್ ಗೌಡ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೆಲವು ನನ್ನ ಪರಿಚಿತರಿಗೆ ಹನಿಟ್ರ್ಯಾಪ್ ಮಾಡಲಾಗಿದೆ. ಕೆಲವು ಉದ್ಯಮಿಗಳನ್ನು ವಂಚಿಸಿ ಹನಿಟ್ರ್ಯಾಪ್ ಬಲೆಗೆ ಬೀಳಿಸಿ ಕೋಟ್ಯಾಂತರ ಹಣ ವಸೂಲಿ ಮಾಡಲಾಗಿದೆ. ಈ ಸಂಬಂಧ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ಶಾಸಕ ಹರೀಶ್ ಗೌಡ ಹೇಳಿದರು.
ಹನಿಟ್ರ್ಯಾಪ್ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ
ಬಂಧಿತರನ್ನು ಸಂತೋಷ್ ಹಾಗೂ ಪುಟ್ಟರಾಜು ಎಂದು ಗುರುತಿಸಲಾಗಿದೆ. ಹನಿಟ್ರ್ಯಾಪ್ ಮೂಲಕ ಕೋಟ್ಯಾಂತರ ಹಣ ಬೇಡಿಕೆಯಿಡುತ್ತಿದ್ದ ಗ್ಯಾಂಗ್ ನಲ್ಲಿ ಓರ್ವ ಯುವತಿ ಕೂಡ ಭಾಗಿಯಾಗಿದ್ದಾಳೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಶಾಸಕ ಹರೀಶ್ ಗೌಡ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಸಿಸಿಬಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು. ಸದ್ಯ, ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.