![](https://kannadadunia.com/wp-content/uploads/2019/12/Siddaramaiah_3.jpg)
ಕೊಡಗು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಇಂದು ಕಾಂಗ್ರೆಸ್ ಗೆ ಗುಡ್ ಬೈ ಹೇಳಿ, ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ನಿಂದ ಯಾವುದೇ ಅನ್ಯಾಯವಾಗಿಲ್ಲ. ನಾವು ಅವರಿಗೆ ಟಿಕೆಟ್ ಕೊಟ್ಟಿದ್ದೇವು. ಆದರೆ ಅವರು ಸೋತರು ಎಂದು ಹೇಳಿದ್ದಾರೆ.
ಬಿಜೆಪಿಯಲ್ಲಿ ಅವಮಾನ ಆಗಿದೆ ಮತ್ತೆ ಆ ಪಕ್ಷಕ್ಕೆ ಹೋಗಲ್ಲ ಅಂತ ಹೇಳಿದ್ರು, ನಾವು ಅವರನ್ನು ಎಂಎಲ್ ಸಿ ಮಾಡಿದ್ದೇವೆ, ಜಗದೀಶ್ ಶೆಟ್ಟರ್ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದ್ದೇವೆ ಎಂದು ಹೇಳಿದ್ದಾರೆ.