ಕೆಲ ದಿನಗಳ ಹಿಂದೆ ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕಿ ಹಾಗೂ ಬ್ಯಾಂಕ್ ನೌಕರರೊಬ್ಬರು ಉಗ್ರರ ಗುಂಡೇಟಿಗೆ ಬಲಿಯಾಗಿದ್ದರು. ಈ ಸಂದರ್ಭದಲ್ಲಿ ಕೆಲವು ವಿಡಿಯೋಗಳು ಹರಿದಾಡಿದ್ದು, ಕೇಂದ್ರ ಸರ್ಕಾರದಿಂದ ತಮಗೆ ಯಾವುದೇ ರಕ್ಷಣೆ ಸಿಗುತ್ತಿಲ್ಲ. ಹೀಗಾಗಿ ಕಣಿವೆ ತೊರೆಯುತ್ತಿರುವುದಾಗಿ ಕೆಲವರು ಇದರಲ್ಲಿ ಹೇಳಿದ್ದರು.
ಅಲ್ಲದೆ, ಕಾಶ್ಮೀರಿ ಪಂಡಿತ ಸಮೂಹ ಎಂದು ಹೇಳಿಕೊಂಡ ಕೆಲವರು ವಿಡಿಯೋ ಮಾಡಿ, ನಮಗೆ ಕೇಂದ್ರ ಸರ್ಕಾರದಿಂದ ಯಾವುದೇ ಸವಲತ್ತು ದೊರೆಯುತ್ತಿಲ್ಲ ಎಂದು ಆರೋಪಿಸಿದ್ದು, ಇದೀಗ ಕೇಂದ್ರ ಸರ್ಕಾರ ಈ ಕುರಿತಂತೆ ಮಹತ್ವದ ಮಾಹಿತಿಯನ್ನು ನೀಡಿದೆ.
ಸಂಸತ್ತಿನಲ್ಲಿ ಕೇಂದ್ರ ಸಚಿವ ನಿತ್ಯಾನಂದ ರೈ ಈ ಕುರಿತು ಮಾಹಿತಿ ನೀಡಿದ್ದು, 320ನೇ ವಿಧಿ ರದ್ದುಪಡಿಸಿದ ಬಳಿಕ ಯಾವುದೇ ಕಾಶ್ಮೀರಿ ಪಂಡಿತರು ಕಣಿವೆ ತೊರೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಪ್ರಧಾನಿ ಅಭಿವೃದ್ಧಿ ಪ್ಯಾಕೇಜ್ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ರಾಜೀನಾಮೆಯನ್ನು ನೀಡಿಲ್ಲ ಎಂದು ತಿಳಿಸಿದ್ದಾರೆ.