ಬೆಂಗಳೂರು : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ಕೈಗಾರಿಕಾ ಸಂಸ್ಥೆಗಳಿಗೆ ಬೆಸ್ಕಾಂ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ಲೋಡ್ ಶೆಡ್ಡಿಂಗ್ ಇರುವುದಿಲ್ಲ ಎಂದು ಬೆಸ್ಕಾಂ ಕೈಗಾರಿಕಾ ಸಂಸ್ಥೆಗಳಿಗೆ ಭರವಸೆ ನೀಡಿದೆ.
ಬೆಸ್ಕಾಂ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆಯಲ್ಲಿ ವಿವಿಧ ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ರಾಜ್ಯದಲ್ಲಿನ ವಿದ್ಯುತ್ ಬಿಕ್ಕಟ್ಟಿನ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕೈಗಾರಿಕೋದ್ಯಮಿಗಳ ಭಯವನ್ನು ನಿವಾರಿಸಿದ ಬೆಸ್ಕಾಂ ಅಧಿಕಾರಿಗಳು, ಕೈಗಾರಿಕೆಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಭರವಸೆ ನೀಡಿದರು.
ಸಿಎಂ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ರೈತರಿಗೆ ಐದು ಗಂಟೆಗಳ ನಿರಂತರ ವಿದ್ಯುತ್ ಪೂರೈಸುವುದಾಗಿ ಭರವಸೆ ನೀಡಿದ್ದಾರೆ. ಆದರೆ ಕೈಗಾರಿಕೆಗಳಿಗೆ ಲೋಡ್ ಶೆಡ್ಡಿಂಗ್ ಬಗ್ಗೆ ಯಾವುದೇ ಭರವಸೆ ನೀಡಿಲ್ಲ ಎಂದು ಕೈಗಾರಿಕಾ ಪ್ರತಿನಿಧಿಗಳು ತಿಳಿಸಿದ್ದಾರೆ.