ಹುಬ್ಬಳ್ಳಿ : ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ಯಾವುದೇ ನಷ್ಟ ಆಗಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ‘ ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಆದರೆ ಸಾರಿಗೆ ಇಲಾಖೆಗೆ ಯಾವುದೇ ನಷ್ಟ ಆಗಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಪುಣ್ಯ ಕ್ಷೇತ್ರಗಳಿಗೆ ತೆರಳುತ್ತಿರುವ ಮಹಿಳೆಯರ ಸಂಖ್ಯೆ ಹೆಚ್ಚಳವಾಗಿದೆ, ಒಮ್ಮೆ ಹೋದವರು ಮತ್ತೆ ಹೋಗೋದಿಲ್ಲ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಹೋಗಲಿದೆ. ಪ್ರಯಾಣಿಕರ ಜೊತೆ ಸಿಬ್ಬಂದಿಗಳು ಸೌಜನ್ಯದಿಂದ ವರ್ತಿಸುವಂತೆ ಸೂಚನೆ ನೀಡಿದ್ದೇನೆ ಎಂದರು.
ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, 15 ದಿನಗಳಲ್ಲಿ 7 ಕೋಟಿಗೂ ಹೆಚ್ಚು ಮಹಿಳೆಯರು ಪ್ರಯಾಣ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ನಿನ್ನೆ ಒಂದೇ ದಿನ 58,14,524 ಮಹಿಳಾ ಪ್ರಯಾಣಿಕರ ಓಡಾಟ ನಡೆಸಿದ್ದು, KSRTC ಬಸ್ನಲ್ಲಿ ನಿನ್ನೆ 17,29,314 ಮಹಿಳೆಯರು ಪ್ರಯಾಣಿಸಿದ್ದಾರೆ. ಬಿಎಂಟಿಸಿ ಬಸ್ನಲ್ಲಿ ನಿನ್ನೆ 18,95,144 ಹಾಗೂ ವಾಯವ್ಯ ಸಾರಿಗೆ ಬಸ್ನಲ್ಲಿ 14,01,910 ಮಹಿಳೆಯರು ಪ್ರಯಾಣ ಮಾಡಿದ್ದಾರೆ.ಜೂ.11ರಿಂದ ಜೂ.24ರವರೆಗೆ 7,15,58,775 ಮಹಿಳೆಯರು ಪ್ರಯಾಣ ಮಾಡಿದ್ದು 7,15,58,775 ಮಹಿಳಾ ಪ್ರಯಾಣಿಕರ ಟಿಕೆಟ್ ವೆಚ್ಚ 166,09,27,526 ರೂ. ಆಗಿದೆ.. ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಆರಂಭಿಸಿದ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಎಲ್ಲಾ ಧಾರ್ಮಿಕ ಸ್ಥಳಗಳುಮಹಿಳಾ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದೆ. ಜೂನ್ 11ರಂದು ಸಿಎಂ ಸಿದ್ದರಾಮಯ್ಯ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದರು.