alex Certify ಮಾಸ್ಕ್ ಕಡ್ಡಾಯ ಹಿಂಪಡೆದ ಮೊದಲ ರಾಜ್ಯ ಮಹಾರಾಷ್ಟ್ರ: ಮಾಸ್ಕ್ ಸೇರಿ ಎಲ್ಲಾ ಕೋವಿಡ್ ನಿರ್ಬಂಧ ಕೈಬಿಡಲು ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಸ್ಕ್ ಕಡ್ಡಾಯ ಹಿಂಪಡೆದ ಮೊದಲ ರಾಜ್ಯ ಮಹಾರಾಷ್ಟ್ರ: ಮಾಸ್ಕ್ ಸೇರಿ ಎಲ್ಲಾ ಕೋವಿಡ್ ನಿರ್ಬಂಧ ಕೈಬಿಡಲು ನಿರ್ಧಾರ

ಮುಂಬೈ: ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾದ ಹಿನ್ನಲೆಯಲ್ಲಿ ಮಹಾರಾಷ್ಟ್ರದಲ್ಲಿ ಎಲ್ಲಾ ಕೋವಿಡ್ ನಿರ್ಬಂಧಗಳನ್ನು ಕೈಬಿಡಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಇನ್ನು ಮುಂದೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುವುದಿಲ್ಲ. ಈ ರೀತಿ ಮಾಸ್ಕ್ ನಿರ್ಬಂಧ ಹಿಂಪಡೆದ ಮೊದಲ ರಾಜ್ಯ ಮಹಾರಾಷ್ಟ್ರ ಆಗಿದೆ.

ರಾಜ್ಯದಲ್ಲಿ ಏಪ್ರಿಲ್ 2 ರಿಂದ ಜಾರಿಗೆ ಬರುವಂತೆ ನಿರ್ಬಂಧಗಳನ್ನು ತೆರವು ಮಾಡಲು ಗುರುವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರ ಕುಸಿತ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ

ಮುಂಬೈ ಲೋಕಲ್ ಟ್ರೈನ್ ಗಳಲ್ಲಿ ಪ್ರಯಾಣಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಎರಡು ಬಾರಿ ಲಸಿಕೆ ಪಡೆದುಕೊಂಡಿರಬೇಕು ಎಂಬ ನಿಯಮವನ್ನು ರದ್ದು ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.

ನಿರ್ಬಂಧ ತೆರವುಗೊಳಿಸಿದ್ದರೂ, ಸಾರ್ವಜನಿಕರು ಮಾಸ್ಕ್ ಧರಿಸುವುದು, ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಮತ್ತು ಲಸಿಕೆ ಪಡೆಯುವುದನ್ನು ಅನುಸರಿಸಬೇಕೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...