ಬೆಂಗಳೂರು : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಾಂಗ್ರೆಸ್ ಗೆ ಸೇರಿದರೂ ಅಚ್ಚರಿ ಪಡಬೇಕಾಗಿಲ್ಲ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಎಂಬಿ ಪಾಟೀಲ್ ‘ಲೋಕಸಭೆ ಚುನಾವಣೆ ವೇಳೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ಗೆ ಬಂದರೂ ಅಚ್ಚರಿಯಿಲ್ಲ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ನಾವು ವಿಚಾರ ಮಾಡುತ್ತೇವೆ ಎಂದರು. ಈಶ್ವರಪ್ಪ ಬಹಳ ಮೇಧಾವಿಗಳು. ಅವರ ಹೇಳಿಕೆಗೆ ನಾನು ಉತ್ತರ ಕೊಡಲ್ಲ ಎಂದರು.
ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು ಹೌದು ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರಿದ್ದಾರೆ, ಈಶ್ವರಪ್ಪ ಬಂದರೂ ಅಚ್ಚರಿಯಿಲ್ಲ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು.