alex Certify ನಿರುದ್ಯೋಗಿ ಪದವೀಧರರಿಗೆ ಮದ್ಯದಂಗಡಿ ಲೈಸೆನ್ಸ್ ನೀಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವ ತಿಮ್ಮಾಪುರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿರುದ್ಯೋಗಿ ಪದವೀಧರರಿಗೆ ಮದ್ಯದಂಗಡಿ ಲೈಸೆನ್ಸ್ ನೀಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವ ತಿಮ್ಮಾಪುರ

ಬೆಳಗಾವಿ(ಸುವರ್ಣಸೌಧ): ನಿರುದ್ಯೋಗಿ ಪದವೀಧರರಿಗೆ ಹೊಸದಾಗಿ ಸಿಎಲ್ -2 ಮದ್ಯದಂಗಡಿ ಲೈಸೆನ್ಸ್ ನೀಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸ್ಪಷ್ಟಪಡಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಸದಸ್ಯ ವೈ.ಎ. ನಾರಾಯಣ ಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸದ್ಯ 3981 ಸಿಎಲ್ -2, 2465 ಸಿಎಲ್ -7, 3631 ಸಿಎಲ್ -9 ಸನ್ನದು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆದಿರುವುದು ಗಮನಕ್ಕಿದ್ದು, ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು, ಮದ್ಯದ ದರ ಹೆಚ್ಚಳ ಮಾಡಿದ್ದರೂ ಮಾರಾಟ ಕಡಿಮೆಯಾಗಿಲ್ಲ. ಕುಡಿಯುವವರ ಸಂಖ್ಯೆ ಹೆಚ್ಚಿದೆ ಎಂದು ಚಟಾಕಿ ಹಾರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...