ಭಾರತೀಯ ಲೋಕಸೇವಾ ಆಯೋಗ (ಯುಪಿಎಸ್ಸಿ) 2020ರಲ್ಲಿ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದ ಎಲ್ಲ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ನೀಡುವ ಕೋರಿಕೆ ಪರಿಗಣಿಸಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ನಾಗರಿಕ ಸೇವಾ ಪರೀಕ್ಷೆಯ ಆಕಾಂಕ್ಷಿಗಳೆಲ್ಲರಿಗೂ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದ ಕಾರಣ ಮತ್ತೊಂದು ಅವಕಾಶವನ್ನು ಒದಗಿಸಲು ಸರ್ಕಾರ ಯೋಚಿಸುತ್ತಿದೆಯೇ ಎಂಬ ಪ್ರಶ್ನೆಗೆ ಸಚಿವ ಜಿತೇಂದ್ರ ಸಿಂಗ್ ಅವರು ಈ ರಾಜ್ಯಸಭೆಯಲ್ಲಿ ಉತ್ತರ ನೀಡಿದ್ದಾರೆ.
ನಾಗರಿಕ ಸೇವೆಗಳ ಪರೀಕ್ಷೆಯನ್ನು ಯುಪಿಎಸ್ಸಿ ವಾರ್ಷಿಕವಾಗಿ ಮೂರು ಹಂತಗಳಲ್ಲಿ ನಡೆಸುತ್ತದೆ. ಪ್ರಾಥಮಿಕ, ಮುಖ್ಯ ಮತ್ತು ಸಂದರ್ಶನ ರೂಪದಲ್ಲಿ ಪರೀಕ್ಷೆ ಇರುತ್ತದೆ.
ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ವಿದೇಶಿ ಸೇವೆ (ಐಎಫ್‌ಎಸ್) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳನ್ನು ಆಯ್ಕೆ ಮಾಡಲು ಈ ಪರೀಕ್ಷೆ ನಡೆಸಲಾಗುತ್ತದೆ.