alex Certify ಪಿಯುಸಿ ಸರ್ಟಿಫಿಕೇಟ್ ತೋರಿಸದಿದ್ರೆ ನೋ ಫ್ಯುಯೆಲ್; ದೆಹಲಿ ಸರ್ಕಾರದ ಮಹತ್ವದ ನಿರ್ಧಾರ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಯುಸಿ ಸರ್ಟಿಫಿಕೇಟ್ ತೋರಿಸದಿದ್ರೆ ನೋ ಫ್ಯುಯೆಲ್; ದೆಹಲಿ ಸರ್ಕಾರದ ಮಹತ್ವದ ನಿರ್ಧಾರ..!

ದೆಹಲಿ ಅಂದ್ರೆ ತಕ್ಷಣ ನೆನಪಾಗೋದು ವಾಯುಮಾಲಿನ್ಯ.‌ ಅದ್ರಲ್ಲೂ ಚಳಿಗಾಲದಲ್ಲಿ ದೆಹಲಿಯ ವಾಯುಗುಣಮಟ್ಟ ಕುಸಿಯೋದು ಹೊಸ ವಿಷಯವೇನಲ್ಲ. ಹೀಗಾಗಿ ರಾಷ್ಟ್ರ ರಾಜಧಾನಿಯ ವಾಯು ಗುಣಮಟ್ಟವನ್ನ ಸುಧಾರಿಸಲು ದೆಹಲಿ ಸರ್ಕಾರ ಹಲವು ಕ್ರಮಗಳಿಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ಇನ್ಮುಂದೆ ಪೆಟ್ರೋಲ್ ಬಂಕ್ ಗಳಲ್ಲಿ ಪೆಟ್ರೋಲ್, ಡೀಸೆಲ್ ಹಾಕಿಸಿಕೊಳ್ಳಲು ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರವನ್ನು(PUC) ಕಡ್ಡಾಯಗೊಳಿಸಲು ದೆಹಲಿ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಇಂತಹ ಕ್ರಮಗಳನ್ನು ದೆಹಲಿ ಸರ್ಕಾರ ಇದೇ ಮೊದಲ ಬಾರಿಗೆ ಘೋಷಿಸಿಲ್ಲ, 2021ರ ಅಕ್ಟೋಬರ್ ನಲ್ಲಿಯೂ ಇಂತಹ ನಿಯಮವನ್ನು ಘೋಷಿಸಿ, ವಾಹನ ಸವಾರರಲ್ಲಿ ಅರಿವು ಮೂಡಿಸುವ ಅಭಿಯಾನ ನಡೆಸಿತ್ತು.

ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳು ಭಾರೀ ವಾಯು ಮಾಲಿನ್ಯ ಸಮಸ್ಯೆಯನ್ನು ಎದುರಿಸುತ್ತಿದೆ. ಈ ನಿಟ್ಟಿನಲ್ಲಿ ದೆಹಲಿಯ ಪೆಟ್ರೋಲ್ ಬಂಕ್ ಗಳಲ್ಲಿ ಇಂಧನ ತುಂಬಿಸಿಕೊಳ್ಳಲು ಮಾಲಿನ್ಯ ನಿಯಂತ್ರಣ ಸರ್ಟಿಫಿಕೇಟ್ ಕಡ್ಡಾಯವಾಗಲಿದೆ. ಈ ಮೂಲಕ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರ ಮಾಡಿದೆ ಎಂದು ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.

ಈ ನೀತಿ ಜಾರಿಗೆ ತರುವುದರಿಂದ ಮಾಲಿನ್ಯಕಾರಕ ವಾಹನಗಳನ್ನ ಸಂಚರಿಸದಂತೆ ತಡೆಯಲು ಸಾಧ್ಯವಾಗಲಿದೆ. ಅಷ್ಟೇ ಅಲ್ಲ ವಾಯು ಗುಣಮಟ್ಟ ಸುಧಾರಿಸಲು ಸಹಾಯಕವಾಗಲಿದೆ. ಈ ನೀತಿಯನ್ನು ಜಾರಿಗೊಳಿಸುವ ಮುನ್ನ ಸಾರ್ವಜನಿಕರ ಅಭಿಪ್ರಾಯ ಪಡೆಯಲಾಗುವುದು, ಸಮಗ್ರವಾಗಿ ಪರಿಶೀಲಿಸಿ ಈ ನಿಯಮ ಜಾರಿಗೊಳಿಸುತ್ತೇವೆ ಎಂದು ಸಚಿವ ಗೋಪಾಲ್ ರೈ ಮಾಹಿತಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...