![](https://kannadadunia.com/wp-content/uploads/2023/04/30-jagadishshettar.jpg)
ಹುಬ್ಬಳ್ಳಿ : ನಾನು ಬಿಜೆಪಿಗೆ ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ, ನಾನು ಯಾವುದೇ ಕಾರಣಕ್ಕೂ ಮತ್ತೆ ಬಿಜೆಪಿಗೆ ಹೋಗುವುದಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಲು ಹಲವು ನಾಯಕರ ಒತ್ತಾಸೆ ಇದೆ. ನನಗೆ ಆಗಿರೋ ಅಪಮಾನವನ್ನು ನಾನು ಇನ್ನೂ ಮರೆತಿಲ್ಲ, ಯಾವುದೇ ಕಾರಣಕ್ಕು ನಾನು ಬಿಜೆಪಿಗೆ ಮತ್ತೆ ವಾಪಸ್ ಆಗುವುದಿಲ್ಲ. ನಾನು ಬಿಜೆಪಿ ತೊರೆದ ನಂತರ ಆದ ಹಾನಿ ಬಗ್ಗೆ ಮನವರಿಕೆ ಆಗಿದೆ ಎಂದು ಹೇಳಿದ್ದಾರೆ.
ಬಿಜೆಪಿಗೆ ಆಗಿರುವ ಹಾನಿಯಿಂದ ಕೆಲವು ಬಿಜೆಪಿ ನಾಯಕರು ನನ್ನನ್ನು ವಾಪಸ್ ಕರೆಸಲು ಯತ್ನಿಸುತ್ತಿದ್ದಾರೆ. ವಾಪಸ್ ಕರೆತರುವಂತೆ ಒತ್ತಡ ಹಾಕುತ್ತಿದ್ದಾರೆ. ಯಾರು ಏನೇ ಪ್ರಯತ್ನ ಮಾಡಿದ್ರೂ ನಾನು ಬಿಜೆಪಿಗೆ ವಾಪಸ್ ಆಗುವುದಿಲ್ಲ ಎಂದರು.