ನವದೆಹಲಿ : ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಹಿನ್ನಡೆಯಾಗಿದೆ.
ಜಾರಿ ನಿರ್ದೇಶನಾಲಯದ ಬಂಧನ ಮತ್ತು ರಿಮಾಂಡ್ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ಜಾsರಿ ಮಾಡಿದೆ. ಮುಂದಿನ ವಿಚಾರಣೆ ಏಪ್ರಿಲ್ 29, 2024 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಹೌದು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ನಿಂದ ಸದ್ಯಕ್ಕೆ ಪರಿಹಾರ ಸಿಕ್ಕಿಲ್ಲ. ದೆಹಲಿ ಮುಖ್ಯಮಂತ್ರಿಯ ಅರ್ಜಿಯ ಬಗ್ಗೆ ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯದಿಂದ (ಇಡಿ) ಪ್ರತಿಕ್ರಿಯೆ ಕೋರಿದೆ.