ನವದೆಹಲಿ: ಮತಾಂತರವಾದವರಿಗೆ ಮೀಸಲಾತಿ ಸೌಲಭ್ಯ ಸಿಗುವುದಿಲ್ಲ ಎಂದು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ರವಿಶಂಕರ ಪ್ರಸಾದ್ ಹೇಳಿದ್ದಾರೆ.
ದಲಿತರು ಕ್ರೈಸ್ತ ಧರ್ಮ ಅಥವಾ ಇಸ್ಲಾಂ ಧರ್ಮಕ್ಕೆ ಮತಾಂತರವಾದರೆ ಅವರಿಗೆ ಮೀಸಲಾತಿಯ ಸೌಲಭ್ಯ ಸಿಗುವುದಿಲ್ಲ ಎಂದು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಸಚಿವರು ಉತ್ತರ ನೀಡಿದ್ದಾರೆ.
ಮತಾಂತರಗೊಂಡ ದಲಿತರು ಪರಿಶಿಷ್ಟ ಜಾತಿಯವರಿಗೆ ಮೀಸಲಾದ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತಿಲ್ಲ. ಅಲ್ಲದೇ, ಇತರೆ ಮೀಸಲಾತಿ ಸೌಲಭ್ಯಗಳು ಕೂಡ ಅವರಿಗೆ ಸಿಗುವುದಿಲ್ಲ ಎಂದು ಹೇಳಿದ್ದಾರೆ.
ಹಿಂದೂ, ಸಿಖ್ ಮತ್ತು ಬೌದ್ಧ ಧರ್ಮಕ್ಕೆ ಮತಾಂತರವಾದವರಿಗೆ ಮೀಸಲಾತಿ ಸೌಲಭ್ಯ ಸಿಗಲಿದೆ. ಸಂವಿಧಾನದ ಪ್ರಕಾರ ಹಿಂದೂ, ಸಿಖ್, ಬೌದ್ಧ ಧರ್ಮದ ಹೊರತಾಗಿ ಬೇರೆಯವರಿಗೆ ಮೀಸಲಾಗಿರಿಸಿದ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ಮತಾಂತರಗೊಂಡವರಿಗೆ ಹಕ್ಕು ಇರುವುದಿಲ್ಲ ಎಂದು ತಿಳಿಸಿದ್ದಾರೆ.