ಮಂಡ್ಯ : ಸದ್ಯಕ್ಕೆ ರಾಜ್ಯ ಸಚಿವ ಸಂಪುಟ ಪುನರ್ ರಚನೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ : ಸದ್ಯಕ್ಕೆ ರಾಜ್ಯ ಸಚಿವ ಸಂಪುಟ ಪುನರ್ ರಚನೆ ಇಲ್ಲ, ಸಚಿವ ಸಂಪುಟ ಪುನರ್ ರಚಿಸಲು ಹೈಕಮಾಂಡ್ ಹೇಳಿಲ್ಲ, ನಾವು ಈ ಬಗ್ಗೆ ತೀರ್ಮಾನ ಕೈಗೊಂಡಿಲ್ಲ. ಸದ್ಯಕ್ಕೆ ಈ ಬಗ್ಗೆ ಯಾವುದೇ ಚರ್ಚೆ ಇಲ್ಲ ಎಂದು ಅವರು ಹೇಳಿದರು.
ಮುಡಾ ಹಗರಣದಲ್ಲಿ ತನಿಖೆ ಮಾಡಲು ಇಡಿ ಅಧಿಕಾರಿಗಳಿಗೆ ಅಧಿಕಾರ ಇಲ್ಲ. ಪ್ರಕರಣದ ತನಿಖೆ ಮಾಡಲು ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ ನೀಡಿದೆ. ಆದರೆ ಇಡಿ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ ಎಂದರು.