ಮೈಸೂರು : ಈ ಬಾರಿ ರಾಜ್ಯದ ಶಾಲಾ ವಿದ್ಯಾರ್ಥಿಗಳ ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಪ್ಪಿದ್ದನ್ನು ಸರಿ ಮಾಡಲಾಗಿದೆ, ಕೆಲವು ವ್ಯಾಕರಣಗಳನ್ನು ಸರಿಪಡಿಸಲಾಗಿದೆ. ಆದರೆ ಪಠ್ಯದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.
ಮುಂದಿನ ಮೂರು ವರ್ಷಗಳಲ್ಲಿ 3,000 ಶಾಲೆ
ಮುಂದಿನ ಮೂರು ವರ್ಷಗಳಲ್ಲಿ 3,000 ಕೆಪಿಎಸ್ ಶಾಲೆ ತೆರೆಯುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಕೆಪಿಎಸ್ ಶಾಲೆಗಳ ಬಗ್ಗೆ ನಮ್ಮ ಸರ್ಕಾರ ಬದ್ಧತೆ ಹೊಂದಿದೆ. ನೂರು ಶಾಲೆಗಳನ್ನು ಇಡೀ ರಾಜ್ಯದ್ಯಂತ ತೆರೆಯುತ್ತೇವೆ. ಮುಂದಿನ ಮೂರು ವರ್ಷಗಳಲ್ಲಿ 3000 ಶಾಲೆ ತೆರೆಯುತ್ತೇವೆ ಎಂದರು. ಶೈಕ್ಷಣಿಕ ವರ್ಷದಿಂದ ಮುಂದಿನ ಮೂರು ವರ್ಷದೊಳಗೆ ಮೂರು ಸಾವಿರ ಕೆಪಿಎಸ್ ಶಾಲೆಗಳು ಆರಂಭವಾಗಲಿವೆ ಎಂದರು.