ಶಾಲೆಯಲ್ಲಿ ಆಟದ ಮೈದಾನ ಕಡ್ಡಾಯ; ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಶಾಲೆಯಲ್ಲಿ ಕಡ್ಡಾಯವಾಗಿ ಆಟದ ಮೈದಾನ ಇರಬೇಕು. ಆಟದ ಮೈದಾನವಿಲ್ಲದೆ ಶಾಲೆ ಇರುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಪ್ರಕರಣ ಒಂದರ ವಿಚಾರಣೆ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಹರಿಯಾಣದ ಯಮುನಾ ನಗರದಲ್ಲಿ ಶಾಲಾ ಮೈದಾನ ಅತಿಕ್ರಮಣ ಮಾಡಿರುವುದನ್ನು ತೆರವುಗೊಳಿಸುವಂತೆ ಆದೇಶಿಸಿದೆ.

ಪ್ರಕರಣದ ವಿವರ: ಹರಿಯಾಣದ ಯಮನಾ ನಗರದಲ್ಲಿ ಶಾಲಾ ಮೈದಾನವನ್ನು ಕೆಲವರು ಅತಿಕ್ರಮಣ ಮಾಡಿದ್ದು, 2016ರಲ್ಲಿ ಈ ಕುರಿತಂತೆ ತೀರ್ಪು ನೀಡಿದ್ದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, ಮಾರುಕಟ್ಟೆಯ ಬೆಲೆಗೆ ಅತಿಕ್ರಮಣ ದಾರರಿಗೆ ಮಾರಾಟ ಮಾಡಲು ಆದೇಶ ನೀಡಿತ್ತು.

ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದ್ದು, ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಬಿ.ವಿ. ನಾಗರತ್ನ ಅವರಿದ್ದ ದ್ವಿಸದಸ್ಯ ನ್ಯಾಯಪೀಠ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಇಂತಹ ಆದೇಶ ನೀಡಿರುವುದು ಗಂಭೀರವಾದ ತಪ್ಪು ಎಂದು ಹೇಳಿದೆ.

ಅಲ್ಲದೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶವನ್ನು ವಜಾ ಮಾಡಿರುವ ಸುಪ್ರೀಂ ಕೋರ್ಟ್ ನ್ಯಾಯ ಪೀಠ, ಅತಿಕ್ರಮಣ ಪ್ರದೇಶವನ್ನು ತೆರವುಗೊಳಿಸಿ ಮತ್ತೆ ಶಾಲೆಯ ವಶಕ್ಕೆ ನೀಡಲು 12 ತಿಂಗಳ ಗಡುವು ವಿಧಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read