ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸ್ಟಾಲಿನ್ ರನ್ನು ನೀರಾವರಿ ಸಚಿವರನ್ನಾಗಿ ನೇಮಕ ಮಾಡಿಕೊಂಡರೂ ಅಚ್ಚರಿಯಿಲ್ಲ ಎಂದು ಬಿಜೆಪಿ ಟ್ವೀಟ್ ನಲ್ಲಿ ಕಿಡಿಕಾರಿದೆ.
ತಮಿಳುನಾಡಿನ 35 ಸಚಿವರಿಗಿಂತಲೂ ಹೆಚ್ಚು ಶ್ರಮಪಟ್ಟು, ನ್ಯಾಯಾಲಯ ಹಾಗೂ ನ್ಯಾಯಾಧಿಕರಣ ಪ್ರಾಧಿಕಾರದಲ್ಲಿ ತಮಿಳುನಾಡಿನ ಹಿತಾಸಕ್ತಿಯನ್ನು ಕಾಪಾಡಿ, ಕಾವೇರಿ ನೀರು ಲೀಲಾಜಾಲವಾಗಿ ಹರಿಯುವಂತೆ ಮಾಡಿದ ಸಿದ್ದರಾಮಯ್ಯಅವರನ್ನು ಗುರುತಿಸಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ತಮ್ಮ ಸಂಪುಟಕ್ಕೆ ನೂತನ ನೀರಾವರಿ ಸಚಿವರನ್ನಾಗಿ ನೇಮಕ ಮಾಡಿಕೊಂಡರೆ ಅಚ್ಚರಿಯಿಲ್ಲ. ಕರ್ನಾಟಕದ ಹಿತವನ್ನು ಬದಿಗಿಟ್ಟು ತಮಿಳುನಾಡಿಗೆ ನೀರು ಹರಿಸುತ್ತಾ DMK ಹಾಗೂ I.N.D.I ಮೈತ್ರಿಕೂಟದ ಬಾಂಧವ್ಯವನ್ನು ಮತ್ತಷ್ಟು ಭದ್ರಗೊಳಿಸಬೇಕೆಂಬ ರಾಹುಲ್ ಗಾಂಧಿರವರ ಸೂಚನೆಯನ್ನು ಸಿದ್ದರಾಮಯ್ಯರವರು ಚಾಚೂ ತಪ್ಪದೆ ಪರಿಪಾಲಿಸುತ್ತಿದ್ದಾರೆ! ಎಂದು ಬಿಜೆಪಿ ಟ್ವೀಟ್ ನಲ್ಲಿ ಕಿಡಿಕಾರಿದೆ.