ಬೆಂಗಳೂರು : ನಾಳೆ ಯತೀಂದ್ರಗೆ ಟಿಪ್ಪು ಸುಲ್ತಾನ್ ಹೆಸರು ಇಟ್ಟರೂ ಅಚ್ಚರಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಟಾಂಗ್ ನೀಡಿದೆ.
ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ವಿಚಾರಕ್ಕೆ ಬಿಜೆಪಿ ವಿರೋಧಿಸಿದೆ. ಈ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದೆ.
ಈ ಕುರಿತು ಟ್ವೀಟ್ ಮಾಡಿದ ಬಿಜೆಪಿ ‘ಲೋಕಸಭಾ ಚುನಾವಣೆಗಾಗಿ ಅಲ್ಪಸಂಖ್ಯಾತರ ಓಲೈಕೆಗೆ 10 ಸಾವಿರ ಕೋಟಿ ಕೊಡುತ್ತಿರುವ ಸಿದ್ದರಾಮಯ್ಯ ಅವರು ಅವರನ್ನು ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು’
1) ಮೈಸೂರಿನಲ್ಲಿ ಟಿಪ್ಪು ವಿಮಾನ ನಿಲ್ದಾಣ
2) ವಿಧಾನಸೌಧಕ್ಕೆ ಟಿಪ್ಪು ಸೌಧವೆಂದು ಮರು ನಾಮಕರಣ
3) ಮೈಸೂರು ವಿವಿಗೆ ಟಿಪ್ಪು ಹೆಸರು
4) ಟಿಪ್ಪುವಿನ 108 ಅಡಿ ಪ್ರತಿಮೆ
5) ಟಿಪ್ಪು ಮದ್ಯದ ಬಾಟಲಿ
ಬಿಎಂಟಿಸಿ/ಕೆಎಸ್ಆರ್ಟಿಸಿಗೆ ಟಿಪ್ಪು ಸಾರಿಗೆ ಎಂಬ ಹೆಸರು. ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಸಿದ್ದರಾಮಯ್ಯ ಸಾಹೇಬರು ನಾಳೆ ಯತೀಂದ್ರ ಅವರಿಗೆ “ಟಿಪ್ಪು” ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ..! ಎಂದು ಬಿಜೆಪಿ ಟಾಂಗ್ ನೀಡಿದೆ.
ಬೆಳಗಾವಿಯಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ನಡೆದ ಘಟನೆ ನಾಗರೀಕ ಸಮಾಜವೇ ತಲೆತಗ್ಗಿಸುವಂತಹದ್ದು. ಆದರೆ ಮಹಿಳಾ ವಿರೋಧಿ ಮಾತ್ರ ಈ ಘಟನೆಯ ಬಗ್ಗೆ ತುಟಿಕ್ ಪಿಟಿಕ್ ಅನ್ನುತ್ತಿಲ್ಲ. ಮಹಿಳಾ ವಿರೋಧಿ ಸಿಎಂ ಅವರು, ಬೆಳಗಾವಿಯಲ್ಲೇ ಇದ್ದರೂ, ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಲಿಲ್ಲ ಎಂದು ಬಿಜೆಪಿ ಕುಟುಕಿದೆ.