ಬೆಂಗಳೂರು : ಬಹುಮಹಡಿ ಖಾಸಗಿ ಆಸ್ಪತ್ರೆಗಳಿಗೆ ಅಗ್ನಿಶಾಮಕ ಇಲಾಖೆಯಿಂದ ‘ಎನ್ ಒ ಸಿ’ ಪಡೆಯುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.
ರಾಜ್ಯದಲ್ಲಿ 21 ಮೀಟರ್ಗಿಂತಲೂ ಎತ್ತರದ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳ ವ್ಯಾಪ್ತಿಯಲ್ಲಿ ಅಗತ್ಯ ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.