alex Certify ಮಾಂಸದಂಧೆ ಅಡ್ಡೆ ಮೇಲೆ ದಾಳಿ: ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 12 ಮಹಿಳೆಯರು ಸೇರಿ 28 ಮಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಂಸದಂಧೆ ಅಡ್ಡೆ ಮೇಲೆ ದಾಳಿ: ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 12 ಮಹಿಳೆಯರು ಸೇರಿ 28 ಮಂದಿ ಅರೆಸ್ಟ್

ನೋಯ್ಡಾ: ನೋಯ್ಡಾದ ಸೆಕ್ಟರ್ 49 ರ ಪೊಲೀಸ್ ಠಾಣೆ ಪ್ರದೇಶದ ಮನೆಯೊಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 12 ಮಹಿಳೆಯರು ಸೇರಿದಂತೆ 28 ಮಂದಿಯನ್ನು ಬಂಧಿಸಲಾಗಿದೆ.

ಸೆಕ್ಟರ್ 49 ಪೊಲೀಸ್ ಠಾಣೆ ಪ್ರದೇಶದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

ಹೆಚ್ಚುವರಿ ಪೊಲೀಸ್ ಆಯುಕ್ತ ರಣವಿಜಯಗ ಸಿಂಗ್ ಈ ಬಗ್ಗೆ ಮಾಹಿತಿ ನೀಡಿ, ಮಾಂಸ ದಂಧೆ ನಡೆಯುತ್ತಿರುವ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 12 ಮಹಿಳೆಯರು, 16 ಪುರುಷರನ್ನು ಬಂಧಿಸಲಾಗಿದೆ. ಕೆಲವು ವಸ್ತುಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಮಾನವ ಕಳ್ಳಸಾಗಣೆ ವಿರೋಧಿ ಘಟಕದ ಅಧಿಕಾರಿಗಳು, ಮಹಿಳಾ ಠಾಣೆ ಪೊಲೀಸರು ಕೂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಎಫ್ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...