
ನೊಯ್ಡಾದ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಕೂಲರ್ ಉತ್ಪಾದಕಾ ಕಾರ್ಖಾನೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಮೂರು ಘಟಕಗಳು ಹೊತ್ತಿ ಉರಿದಿವೆ.
ಗ್ರೇಟರ್ ನೊಯ್ಡಾದ ಸೂರಜ್ ಪುರ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ. ಕೂಲರ್ ಉತ್ಪಾದನಾ ಕಾರ್ಖಾನೆ ಹಗೂ ಎರಡು ವೇರ್ ಹೌಸ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.
30 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.