alex Certify ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮರೆಮಾಚುವುದು ಅಪರಾಧ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮರೆಮಾಚುವುದು ಅಪರಾಧ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಮಾಹಿತಿ ಇದ್ದರೂ, ಅದನ್ನು ವರದಿ ಮಾಡದೇ ಹೋದಲ್ಲಿ ಅದನ್ನು ಅಪರಾಧ ಎಂದು ಪರಿಗಣಿಸಲಾಗುತ್ತೆ, ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಾಗಿ ಹೇಳಿದೆ. ಅಷ್ಟೆ ಅಲ್ಲ ಕೃತ್ಯ ಎಸಗಿರುವ ಅಪರಾಧಿಗಳನ್ನ ರಕ್ಷಿಸುವ ನೇರ ಪ್ರಯತ್ನ ಮಾಡಿದ್ದೇ ಆದಲ್ಲಿ ಅದನ್ನು ಸಹ ಅಪರಾಧ ಎಂದು ಹೇಳಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (PACSO) ಕಾಯ್ದೆಯಡಿ, ಅಪರಾಧಗಳ ತ್ವರಿತ ಮತ್ತು ಸರಿಯಾದ ಕ್ರಮದಲ್ಲಿ ಅರಿವು ಮೂಡಿಸುವ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಹೇಳಿದೆ. ಜೊತೆಗೆ ಇದನ್ನು ನಿರ್ಲಕ್ಷಿಸಿದಲ್ಲಿ, ಇಲ್ಲವಾದರಲ್ಲಿ ಪಾಲನೆ ಮಾಡದೇ ಹೋದಲ್ಲಿ ಕಾನೂನನ್ನೇ ನಿರ್ಲಕ್ಷಿಸಿದಂತಾಗುತ್ತೆ ಎಂದು ಹೇಳಿದೆ.

2019ರಲ್ಲಿ ಮಹಾರಾಷ್ಟ್ರದ ಶಾಲೆಯೊಂದರ 17 ಬುಡಕಟ್ಟು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದ ಬಗ್ಗೆ ವರದಿ ನೀಡುವಲ್ಲಿ ವೈದ್ಯರೊಬ್ಬರು ವಿಫಲರಾಗಿದ್ದರು. ಅವರ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣವನ್ನು ರದ್ದು ಮಾಡಿ ಬಾಂಬೆ ಹೈಕೋರ್ಟ್‌ ಆದೇಶಿಸಿತ್ತು. ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು.

ಅರ್ಜಿ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ಅಜಯ್‌ ರಸ್ತೋಗಿ ಹಾಗೂ ಸಿ.ಟಿ.ರವಿಕುಮಾರ್‌ ಅವರಿದ್ದ ನ್ಯಾಯಪೀಠ, ‘ಇಂಥ ಪ್ರಕರಣಗಳನ್ನು ವರದಿ ಮಾಡದಿರುವುದು ತಪ್ಪಿತಸ್ಥರು ಎಸಗಿರುವ ಅಪರಾಧವನ್ನು ಮರೆಮಾಚುವ ಪ್ರಯತ್ನವಾಗುತ್ತದೆ’ ಎಂದು ಕಟುವಾಗಿ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...