ಉತ್ತರ ಮಧ್ಯ ರೈಲ್ವೆಯ (ಎನ್ಸಿಆರ್) ಪ್ರಯಾಗ್ರಾಜ್, ಉತ್ತರ ಪ್ರದೇಶ ವಿಭಾಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಬರೋಬ್ಬರಿ 1664 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಉತ್ತರ ಮಧ್ಯ ರೈಲ್ವೆ ನೇಮಕಾತಿ 2021ಕ್ಕೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಟ 10ನೇ ತರಗತಿ ಅಥವಾ ಇದಕ್ಕೆ ಸಮನಾದ ವಿದ್ಯಾಭ್ಯಾಸ (10+2 ವ್ಯವಸ್ಥೆ)ವನ್ನು ಪೂರೈಸಿರಬೇಕು. ಕನಿಷ್ಟ 50 ಪ್ರತಿಶತ ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ವೆಲ್ಡರ್, ವೈರ್ ಮ್ಯಾನ್ ಹಾಗೂ ಬಡಗಿ ಕೆಲಸಕ್ಕೆ ಅರ್ಜಿ ಸಲ್ಲಿಸುವವರು 8ನೇ ತರಗತಿ ಹಾಗೂ ಐಟಿಐ ವ್ಯಾಸಂಗ ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 24 ವರ್ಷವಾಗಿದೆ. ಆಗಸ್ಟ್ 2ರಿಂದ ವೆಬ್ ಸೈಟ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಹಾಗೂ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 1 ಕೊನೆಯ ದಿನಾಂಕವಾಗಿದೆ.
ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಮಹಿಳಾ ಅಭ್ಯರ್ಥಿಗಳು, ಎಸ್ಸಿ/ಎಸ್ಟಿ/ ಪಿಡಬ್ಲುಡಿ ಕೋಟಾದವರಿಗೆ ಅರ್ಜಿ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ. 10 ಹಾಗೂ ಐಟಿಐನಲ್ಲಿ ಅಭ್ಯರ್ಥಿಗಳು ಪಡೆದ ಅಂಕವನ್ನು ಆಧರಿಸಿ ಮೆರಿಟ್ ಆಧಾರದ ಮೇಲೆ ನೇಮಕಾತಿ ನಡೆಯಲಿದೆ.