alex Certify ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​ : ಭಾರತೀಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​ : ಭಾರತೀಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉತ್ತರ ಮಧ್ಯ ರೈಲ್ವೆಯ (ಎನ್​ಸಿಆರ್​​) ಪ್ರಯಾಗ್​ರಾಜ್​, ಉತ್ತರ ಪ್ರದೇಶ ವಿಭಾಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಬರೋಬ್ಬರಿ 1664 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಉತ್ತರ ಮಧ್ಯ ರೈಲ್ವೆ ನೇಮಕಾತಿ 2021ಕ್ಕೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಟ 10ನೇ ತರಗತಿ ಅಥವಾ ಇದಕ್ಕೆ ಸಮನಾದ ವಿದ್ಯಾಭ್ಯಾಸ (10+2 ವ್ಯವಸ್ಥೆ)ವನ್ನು ಪೂರೈಸಿರಬೇಕು. ಕನಿಷ್ಟ 50 ಪ್ರತಿಶತ ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ವೆಲ್ಡರ್, ವೈರ್​ ಮ್ಯಾನ್​ ಹಾಗೂ ಬಡಗಿ ಕೆಲಸಕ್ಕೆ ಅರ್ಜಿ ಸಲ್ಲಿಸುವವರು 8ನೇ ತರಗತಿ ಹಾಗೂ ಐಟಿಐ ವ್ಯಾಸಂಗ ಪೂರ್ಣಗೊಳಿಸಿರಬೇಕು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 24 ವರ್ಷವಾಗಿದೆ. ಆಗಸ್ಟ್​ 2ರಿಂದ ವೆಬ್​ ಸೈಟ್​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಹಾಗೂ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 1 ಕೊನೆಯ ದಿನಾಂಕವಾಗಿದೆ.

ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಮಹಿಳಾ ಅಭ್ಯರ್ಥಿಗಳು, ಎಸ್​ಸಿ/ಎಸ್ಟಿ/ ಪಿಡಬ್ಲುಡಿ ಕೋಟಾದವರಿಗೆ ಅರ್ಜಿ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ. 10 ಹಾಗೂ ಐಟಿಐನಲ್ಲಿ ಅಭ್ಯರ್ಥಿಗಳು ಪಡೆದ ಅಂಕವನ್ನು ಆಧರಿಸಿ ಮೆರಿಟ್​ ಆಧಾರದ ಮೇಲೆ ನೇಮಕಾತಿ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...