alex Certify ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ ಹಿನ್ನಲೆ ; ಈ ಜಿಲ್ಲೆಯಲ್ಲಿ ‘ಮದ್ಯ’ ಮಾರಾಟ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ ಹಿನ್ನಲೆ ; ಈ ಜಿಲ್ಲೆಯಲ್ಲಿ ‘ಮದ್ಯ’ ಮಾರಾಟ ನಿಷೇಧ

ಬಳ್ಳಾರಿ : ಜಿಲ್ಲೆಯಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ, ದ್ವೈವಾರ್ಷಿಕ ಚುನಾವಣೆಯ ಹಿನ್ನಲೆಯಲ್ಲಿ ಜೂನ್ 3 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ಷರ್ತುಗಳು) ನಿಯಮಗಳು, 1967ರ ನಿಯಮ 10-ಬಿ ರಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಿ ಒಣ ದಿನ (Dry day) ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ಜೂನ್ 1ರ ಸಂಜೆ 04 ಗಂಟೆಯಿಂದ ಜೂನ್ 3 ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ವಿವಿಧ ಮಧ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್ಗಳನ್ನು ಮುಚ್ಚುವಂತೆಯೂ ಹಾಗೂ ಎಲ್ಲಾ ರೀತಿಯ ಮದ್ಯ ತಯಾರಿಕಾ ಹಾಗೂ ವಿತರಣ ಘಟಕಗಳು, ಸಾಗಾಣಿಕೆ, ಸಂಗ್ರಹಣೆಯನ್ನು ಮತ್ತು ಮದ್ಯ ಸಾಗಾಟವನ್ನು ನಿಷೇಧಿಸಿ ಆದೇಶಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಕಲಂ 135ಸಿ (2) ಮತ್ತು (3) ರನ್ವಯ ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯೂ ಆದ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶದಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...