ಬೆಳಗಾವಿ: ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದಡಿಯಲ್ಲಿ 432 ನವೋದ್ಯಮಗಳ ಆರಂಭಕ್ಕೆ ನೋಂದಣಿಯನ್ನು ಮಾಡಿಕೊಂಡಿವೆ. ಆ ಮೂಲಕ ಈ ಭಾಗದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದ್ದು, ನಿಪುಣ ಕರ್ನಾಟಕ ಯೋಜನೆಯಡಿ ಈ ಭಾಗಕ್ಕೆ ಹೆಚ್ಚಿನ ಅವಕಾಶಗಳನ್ನು ನೀಡಲಾಗುವುದು ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ನಡೆದ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತ ವಿಶೇಷ ಚರ್ಚೆಯ ವೇಳೆ ಅವರು ಮಾತನಾಡಿದರು.
ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆ, ಹೊಸ ಆವಿಷ್ಕಾರ ನಿಟ್ಟಿನಲ್ಲಿ 432 ನವೋದ್ಯಮ ಆರಂಭಕ್ಕೆ ನೋಂದಣಿ ಮಾಡಿಕೊಂಡಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿವೆ. ನಿಪುಣ ಕರ್ನಾಟಕ ಯೋಜನೆಯಡಿ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಅವಕಾಶಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.