alex Certify 1,167 ಹುದ್ದೆಗಳಿಗೆ ಪರೀಕ್ಷೆ ಬರೆದ 30,000 ಮಂದಿ…! ಪಾಕ್‌ ದುಃಸ್ಥಿತಿಗೆ ಹಿಡಿದ ಕೈಗನ್ನಡಿ ಎಂದ ನೆಟ್ಟಿಗರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1,167 ಹುದ್ದೆಗಳಿಗೆ ಪರೀಕ್ಷೆ ಬರೆದ 30,000 ಮಂದಿ…! ಪಾಕ್‌ ದುಃಸ್ಥಿತಿಗೆ ಹಿಡಿದ ಕೈಗನ್ನಡಿ ಎಂದ ನೆಟ್ಟಿಗರು

ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಉದ್ಯೋಗಾಕಾಂಕ್ಷಿಗಳು ಸ್ಟೇಡಿಯಂನಲ್ಲಿ ಜಮಾಯಿಸಿ ಪರೀಕ್ಷೆ ಎದುರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಪಾಕ್ ನ ಆರ್ಥಿಕ ಸ್ಥಿತಿಗೆ ಹಿಡಿದ ಕೈಗನ್ನಡಿ ಎಂದು ವಿಶ್ಲೇಷಿಸುತ್ತಿದ್ದಾರೆ.

ಇಸ್ಲಾಮಾಬಾದ್ ಪೊಲೀಸ್ ಪಡೆಗೆ ನೇಮಕಾತಿ ಪರೀಕ್ಷೆಗೆ ಜಮಾಯಿಸಿದ 30,000 ಆಕಾಂಕ್ಷಿಗಳು ಕ್ರೀಡಾಂಗಣದಲ್ಲೇ ಪೆನ್ , ಪೇಪರ್ ಹಿಡಿದ ಕುಳಿತರು.

ಅಂತಿಮವಾಗಿ ಖಾಲಿ ಹುದ್ದೆಗಳಿಗೆ 1,167 ಜನರನ್ನು ಮಾತ್ರ ನೇಮಿಸಿಕೊಳ್ಳಲಾಗುತ್ತದೆ. ಆದರೆ ನಿರುದ್ಯೋಗ ಸಮಸ್ಯೆಯಿಂದಾಗಿ ಯುವಕರು ನೇಮಕಾತಿ ಪರೀಕ್ಷೆಗೆ ಕ್ರೀಡಾಂಗಣದಲ್ಲಿ ಜಮಾಯಿಸಿ ಅಲ್ಲೇ ಪರೀಕ್ಷೆಗೆ ಕುಳಿತರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...