ಹುಬ್ಬಳ್ಳಿ : ಶಾಸಕ ಎಸ್. ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಮಾತ್ರ ಅಲ್ಲ ಇನ್ನೂ ಹಲವರು ಕಾಂಗ್ರೆಸ್ ಗೆ ಬರ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರು ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗ್ತಾರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಶಾಸಕ ಎಸ್. ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಮಾತ್ರ ಅಲ್ಲ ಇನ್ನೂ ಹಲವರು ಕಾಂಗ್ರೆಸ್ ಗೆ ಬರ್ತಾರೆ ಎಂದರು. ನಾಳೆ ಪಕ್ಷದ ಚುನಾವಣಾ ಸಮಿತಿ ಸಭೆ ದೆಹಲಿಯಲ್ಲಿ ನಡೆಯಲಿದೆ. ಸಭೆ ಬಳಿಕ ಕಾಂಗ್ರೆಸ್ ಟಿಕೆಟ್ ವಿಚಾರದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
2 ತಿಂಗಳಲ್ಲಿ ಬೆಂಗಳೂರಿನಲ್ಲಿ ನೀರಿನ ಬವಣೆ ಹೆಚ್ಚುವ ಸಾಧ್ಯತೆ
ಇನ್ನು 2 ತಿಂಗಳಲ್ಲಿ ಬೆಂಗಳೂರಿನಲ್ಲಿ ನೀರಿನ ಬವಣೆ ಹೆಚ್ಚುವ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಎಲ್ಲಾ ಟ್ಯಾಂಕರ್ಗಳನ್ನು ಸರ್ಕಾರ ನಿಯಂತ್ರಣಕ್ಕೆ ತೆಗೆದುಕೊಂಡು ದರ ನಿಗದಿಪಡಿಸುತ್ತಿದೆ. ಸದ್ಯ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ 14781 ಬೋರ್ವೆಲ್ಗಳಿವೆ. ಈ ಪೈಕಿ 6997 ಬೋರ್ವೆಲ್ಗಳು ಬತ್ತಿಹೋಗಿವೆ. ಇದೇ ತಿಂಗಳು 7ರವರೆಗೆ ಟ್ಯಾಂಕರ್ ನೋಂದಣಿಗೆ ಅವಕಾಶ ನೀಡಲಾಗಿದೆ. ಈಗಾಗಲೇ 219 ಟ್ಯಾಂಕರ್ಗಳು ನೋಂದಣಿಯಾಗಿವೆ.
ನಮಗೆ ಬಂದಿರುವ ಮಾಹಿತಿ ಪ್ರಕಾರ ಟ್ಯಾಂಕರ್ಗಳು ಕೆಲವೆಡೆ 500 ಇನ್ನೂ ಕೆಲವೆಡೆ 2000 ರೂ. ಪಡೆಯಲಾಗುತ್ತಿದೆ. ಸರ್ಕಾರ ಮಧ್ಯಪ್ರವೇಶ ಮಾಡಿ ಯಾರಿಗೂ ನಷ್ಟವಾಗದಂತೆ ದರ ನಿಗದಿಮಾಡುತ್ತದೆ. ಮೇ ತಿಂಗಳಲ್ಲಿ ಕಾವೇರಿ 5ನೇ ಹಂತದ ಕಾಮಗಾರಿಗಳು ಮುಕ್ತಾಯವಾಗಲಿದ್ದು, ನೀರಿನ ಬವಣೆ ನೀಗಿಸಲು ಈ ಯೋಜನೆಯೂ ಕೂಡ ನೆರವಾಗಲಿದೆ ಎಂದು ಹೇಳಿದರು.