ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು ಇದನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸುವ ಮೂಲಕ ಸಂತ್ರಸ್ತೆಯರ ಅವಮಾನಪಡಿಸಿರುವ ಘಟನೆ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೈವಾಡವಿದೆ ಎಂದು ಜೆಡಿಎಸ್ ಆರೋಪಿಸಿದೆ.
ಈ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಇಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಪೆನ್ ಡ್ರೈವ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸುತ್ತಿದ್ದಾರೆ. ಇದರ ಮಧ್ಯೆ ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಚಿಕ್ಕಮಗಳೂರಿನ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ನನ್ನ ಹೆಸರು ಹೇಳಿಲ್ಲವೆಂದರೆ ಪಾಪ ಅವರಿಗೆ ನಿದ್ರೆಯೇ ಬರುವುದಿಲ್ಲ, ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್ ಎಂದು ಹೇಳುವ ಮೂಲಕ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವ್ಯಂಗ್ಯವಾಡಿದ್ದಾರೆ.